Featured

ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ – Vishwanews24

ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ

ಕಟೀಲು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಇನ್ನು ಮುಂದೆ ದೇವಳದ ರಥಬೀದಿಯಲ್ಲಿ ಮತ್ತು ಬಸ್‌ಸ್ಟ್ಯಾಂಡ್‌ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಹಣ ನೀಡಬೇಕಾಗುತ್ತದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದಂತೆ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರ ಸುತ್ತೋಲೆ ಮೇರೆಗೆ ದೇವಳದ ರಥಬೀದಿ ಮತ್ತು ಬಸ್ಸು ನಿಲ್ದಾಣದಲ್ಲಿ ವಾಹನ ನಿಲುಗಡೆ ವ್ಯವಸ್ಥೆಯನ್ನು ಹಣ ನೀಡಿ ನಿಲುಗಡೆ ಮಾಡುವಂತೆ ಪರಿವರ್ತಿಸಲಾಗಿದೆ.

ಆಡಳಿತ ಮಂಡಳಿ ದರದ ಕುರಿತು ಬ್ಯಾನರ್ ಅಳವಡಿಸಿದ್ದು ದ್ವಿಚಕ್ರ ವಾಹನ 10 ರೂ, ತ್ರಿಚಕ್ರ ವಾಹನ 20ರೂ, ಲಘುವಾಹನ 30ರೂ ಹಾಗೂ ಘನ ವಾಹನಕ್ಕೆ 50 ರೂ ನಿಗದಿಪಡಿಸಲಾಗಿದೆ.

ಇದನ್ನೂ ಓದಿ : ಪ್ರವೀಣ್ ನೆಟ್ಟಾರು ನಿವಾಸಕ್ಕೆ ಕುಮಾರಸ್ವಾಮಿ ಭೇಟಿ , 5 ಲಕ್ಷ ರೂ.ಚೆಕ್ ವಿತರಿಸಿದ ಮಾಜಿ ಸಿ ಎಂ. Vishwanews24

ವಾಹನ ಪಾರ್ಕಿಂಗ್ ಶುಲ್ಕ ದರ ನಿಗದಿಪಡಿಸಿರುವುದರಿಂದ ದೇವಳಕ್ಕೆ ಬರುವ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಈ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಡಳಿತ ಮಂಡಳಿ ದೇವಳದ ಆಡಳಿತ ಮಂಡಳಿ ಪೇ ಪಾರ್ಕಿಂಗ್ ಬಗ್ಗೆ ಸರ್ಕಾರದ ಧಾರ್ಮಿಕ ಇಲಾಖೆಯಿಂದ ಆದೇಶ ಬಂದಿದ್ದು ಈ ಬಗ್ಗೆ ಬ್ಯಾನರ್ ಅಳವಡಿಸಲಾಗಿದೆ. ಈವರೆಗೆ ಪೇ ಪಾರ್ಕಿಂಗ್ ಆರಂಭಿಸಿಲ್ಲವೆಂದು ತಿಳಿಸಿದೆ.

ಈ ನಡುವೆ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸು ಮೇರೆಗೆ ತಕ್ಷಣದಿಂದ ಪಾರ್ಕಿಂಗ್ ಶುಲ್ಕ ಸಂಗಹ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು ತಾಂತ್ರಿಕ ಪ್ರಕ್ರಿಯೆಗಳ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದೇವಳದ ಮೂಲಗಳು ತಿಳಿಸಿವೆ.

ಇದನ್ನೂ ಓದಿ : ಮುಂದಿನ ದಿನಗಳಲ್ಲಿ ಹತ್ಯೆಯಾದ ಫಾಝಿಲ್ ಮತ್ತು ಮಸೂದ್ ಮನೆಗೆ ಭೇಟಿ : ಸಿಎಂ ಬೊಮ್ಮಾಯಿ – Vishwanews24 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

7 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

8 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

8 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

8 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

8 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago