ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಲಲಿತಾ ಪಂಚಮಿ ಪ್ರಯುಕ್ತ ಗುರುವಾರ ರಾತ್ರಿ ಅನ್ನಪ್ರಸಾದ ಸ್ವೀಕರಿಸಿದ ಸುಮಾರು 18 ಸಾವಿರ ಮಹಿಳಾ ಭಕ್ತರಿಗೆ ದೇವರ ಶೇಷ ವಸ್ತ್ರ ನೀಡಲಾಯಿತು.,
ಸಂಜೆ 6.30ಕ್ಕೆ ಅನ್ನಪ್ರಸಾದ ವಿತರಣೆ ಪ್ರಾರಂಭವಾಗಿದ್ದು, ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು 18 ಸಾವಿರ ಶೇಷವಸ್ತ್ರ ಸಿದ್ಧಪಡಿಸಲಾಗಿದ್ದು, ತಡರಾತ್ರಿಯವರೆಗೂ ವಿತರಣೆ ಕಾರ್ಯ ನಡೆಯಿತು. ಮಧ್ಯಾಹ್ನ ಮತ್ತು ರಾತ್ರಿ ಸುಮಾರು 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.
ಅನ್ನಪ್ರಸಾದ ಹಾಗೂ ಶೇಷವಸ್ತ್ರ ಪಡೆಯಲು ಸಮರ್ಪಕ ಸರದಿಸಾಲಿನ ವ್ಯವಸ್ಥೆ ಮಾಡಲಾಗಿತ್ತು. ಬಸ್ ನಿಲ್ದಾಣ ಪರಿಸರ, ಕುದುರು ಪ್ರದೇಶ ಹಾಗೂ ಸೇತುವೆಯ ಮೇಲೆ ಪ್ರತ್ಯೇಕ ಸಾಲುಗಳಿದ್ದವು. ದೇವರ ದರ್ಶನ ಹಾಗೂ ಅನ್ನಪ್ರಸಾದ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.
ಭದ್ರತಾ ವ್ಯವಸ್ಥೆಗೆ 100 ಪೊಲೀಸರನ್ನು ನಿಯೋಜಿಸಲಾಗಿತ್ತು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದದ 300 ಮಂದಿ ಸ್ವಯಂ ಸೇವಕರಿದ್ದರು. 30 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…