ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇಗುಲಕ್ಕೆ ಸ್ಯಾಂಡಲ್‍ವುಡ್ ನಟ ವಿಜಯ್ ರಾಘವೇಂದ್ರ ಕುಟುಂಬ ಸಮೇತರಾಗಿ ಇಂದು ಭೇಟಿ ನೀಡಿದ್ದಾರೆ. ಇದೇ ವೇಳೆ ದೇವಿಗೆ ಸೀರೆ ಕಾಣಿಕೆ ಸಮರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ವಿಜಯ್ ರಾಘವೇಂದ್ರ ಹಾಗೂ ಪತ್ನಿ ಸ್ಪಂದನಾರಿಗೆ ಕ್ಷೇತ್ರದ ಪ್ರಧಾನ ಅರ್ಚಕ ಲಕ್ಷ್ಮೀ ನಾರಾಯಣ ಆಸ್ರಣ್ಣ ಪ್ರಸಾದ ನೀಡಿ ಆಶೀರ್ವದಿಸಿದರು. ಅಲ್ಲದೆ ಈ ಸಂದರ್ಭದಲ್ಲಿ ದೇಗುಲಕ್ಕೆ ಬಂದಿದ್ದ ಭಕ್ತರು, ಶಾಲಾ ವಿದ್ಯಾರ್ಥಿಗಳು ವಿಜಯ್ ರಾಘವೇಂದ್ರ ಜೊತೆಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು.
ನಮ್ಮೂರಲ್ಲೂ ನಾನು ರಾಮ ಮಂದಿರ ಕಟ್ಟಿಸ್ತಾ ಇದ್ದೇನೆ : ಸಿದ್ದರಾಮಯ್ಯ -Vishwanews24
ಬಳಿಕ ನಟ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಅರ್ಚಕ ರಾಮದಾಸ ಆಚಾರ್ಯ ಅನಂತಕೃಷ್ಣ ಆಚಾರ್ಯ, ವ್ಯವಸ್ಥಾಪನಾ ಸಮಿತಿಯ ರವೀಂದ್ರ ಎಚ್ ಶೆಟ್ಟಿ, ರಘುವೀರ ಶೆಣೈ, ರವಿಶಂಕರ ಪೈ ಮತ್ತಿತರು ಉಪಸ್ಥಿತರಿದ್ದರು. ಜೊತೆಗೆ ಜಾರಿಗೆ ಕಟ್ಟೆ ಕೊರಗಜ್ಜ ಕ್ಷೇತ್ರಕ್ಕೂ ವಿಜಯ್ ರಾಘವೇಂದ್ರ ಕುಟುಂಬ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…