Featured

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ; ಸಂಪೂರ್ಣ ಬತ್ತಿ ಹೋದ ನಂದಿನಿ ನದಿ – Vishwanews24

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ; ಸಂಪೂರ್ಣ ಬತ್ತಿ ಹೋದ ನಂದಿನಿ ನದಿ

ಮಂಗಳೂರು : ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ.

ಈಗಾಗಲೇ ಮಳೆ ಇಲ್ಲದ ಕಾರಣ ಕಟೀಲು ದೇವಸ್ಥಾನದ ಬಳಿ ಹರಿಯುವ ನಂದಿನಿ ನದಿ ಸಂಪೂರ್ಣ ಬತ್ತಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ಉಂಟಾಗಿದೆ. ದೇವಸ್ಥಾನದ ದೈನಂದಿನ ಚಟುವಟಿಕೆಗೆ ಅಡ್ಡಿಯಾಗಿದ್ದು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ–ಪ್ರೌಢ ವಿಭಾಗಗಳಲ್ಲಿ ಬೆಳಿಗ್ಗೆ ಮಾತ್ರ ತರಗತಿ ನಡೆಸಿ ಮಧ್ಯಾಹ್ನದ ನಂತರ ರಜೆ ನೀಡಲಾಗುತ್ತಿದೆ.

ಭಕ್ತರು ದೇವಸ್ಥಾನದ ಒಳಗೆ ಪ್ರವೇಶಿಸುವಾಗ ಕೈ-ಕಾಲು ತೊಳೆಯುವ ನೀರನ್ನು ಬಂದ್ ಮಾಡಲಾಗಿದೆ. ಬೆಳಿಗ್ಗೆ ಗಂಜಿ, ಮಧ್ಯಾಹ್ನ ಹಾಗೂ ರಾತ್ರಿ ಸಮಯದಲ್ಲಿ ಅನ್ನಪ್ರಸಾದಕ್ಕೆ ಸ್ಟೀಲ್ ತಟ್ಟೆಗಳ ಬದಲಿಗೆ ಹಾಳೆತಟ್ಟೆ ಬಳಸಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿನ ಮೂರು ಕೊಳವೆಬಾವಿಗಳು ಹಾಗೂ ಮೂರು ಬಾವಿಗಳು ಬತ್ತಿವೆ. ದೇವಸ್ಥಾನ, ಅನ್ನಪ್ರಸಾದ ತಯಾರಿ ಹಾಗೂ ಗೋಶಾಲೆಗೆ ನಿತ್ಯ 7 ಲಕ್ಷ ಲೀಟರ್‌ ನೀರಿನ ಅವಶ್ಯಕತೆ ಇದೆ. ಈಗ 4 ಲಕ್ಷ ಲೀಟರ್‌ ನೀರು ಸುತ್ತಮುತ್ತಲಿನ ದಾನಿಗಳ ಸಹಾಯದಿಂದ ಸಿಗುತ್ತಿದ್ದು, ಅದರಲ್ಲಿಯೇ ಎಲ್ಲವನ್ನು ಹೊಂದಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸಂಗ್ರಹಿಸಲೆಂದೇ ನಿತ್ಯ ನಾಲ್ವರು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

2 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

4 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

4 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

4 hours ago