ಮಂಗಳೂರು : ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ.
ಈಗಾಗಲೇ ಮಳೆ ಇಲ್ಲದ ಕಾರಣ ಕಟೀಲು ದೇವಸ್ಥಾನದ ಬಳಿ ಹರಿಯುವ ನಂದಿನಿ ನದಿ ಸಂಪೂರ್ಣ ಬತ್ತಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಲಕ್ಷಾಮ ಉಂಟಾಗಿದೆ. ದೇವಸ್ಥಾನದ ದೈನಂದಿನ ಚಟುವಟಿಕೆಗೆ ಅಡ್ಡಿಯಾಗಿದ್ದು, ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಪ್ರಾಥಮಿಕ–ಪ್ರೌಢ ವಿಭಾಗಗಳಲ್ಲಿ ಬೆಳಿಗ್ಗೆ ಮಾತ್ರ ತರಗತಿ ನಡೆಸಿ ಮಧ್ಯಾಹ್ನದ ನಂತರ ರಜೆ ನೀಡಲಾಗುತ್ತಿದೆ.
ಭಕ್ತರು ದೇವಸ್ಥಾನದ ಒಳಗೆ ಪ್ರವೇಶಿಸುವಾಗ ಕೈ-ಕಾಲು ತೊಳೆಯುವ ನೀರನ್ನು ಬಂದ್ ಮಾಡಲಾಗಿದೆ. ಬೆಳಿಗ್ಗೆ ಗಂಜಿ, ಮಧ್ಯಾಹ್ನ ಹಾಗೂ ರಾತ್ರಿ ಸಮಯದಲ್ಲಿ ಅನ್ನಪ್ರಸಾದಕ್ಕೆ ಸ್ಟೀಲ್ ತಟ್ಟೆಗಳ ಬದಲಿಗೆ ಹಾಳೆತಟ್ಟೆ ಬಳಸಲಾಗುತ್ತಿದೆ. ದೇವಸ್ಥಾನದ ಆವರಣದಲ್ಲಿನ ಮೂರು ಕೊಳವೆಬಾವಿಗಳು ಹಾಗೂ ಮೂರು ಬಾವಿಗಳು ಬತ್ತಿವೆ. ದೇವಸ್ಥಾನ, ಅನ್ನಪ್ರಸಾದ ತಯಾರಿ ಹಾಗೂ ಗೋಶಾಲೆಗೆ ನಿತ್ಯ 7 ಲಕ್ಷ ಲೀಟರ್ ನೀರಿನ ಅವಶ್ಯಕತೆ ಇದೆ. ಈಗ 4 ಲಕ್ಷ ಲೀಟರ್ ನೀರು ಸುತ್ತಮುತ್ತಲಿನ ದಾನಿಗಳ ಸಹಾಯದಿಂದ ಸಿಗುತ್ತಿದ್ದು, ಅದರಲ್ಲಿಯೇ ಎಲ್ಲವನ್ನು ಹೊಂದಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನೀರು ಸಂಗ್ರಹಿಸಲೆಂದೇ ನಿತ್ಯ ನಾಲ್ವರು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…