ಹಾಸನ, : ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಕಟ್ಟಡಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಅಪಘಾತದಿಂದಾಗಿ ಚಿಕ್ಕಬಾಣವಾರ ಮೂಲದವರು ಎನ್ನಲಾದ ವಿವೇಕ್ ನಾಯಕ್ (45), ಪತ್ನಿ ರೇಷ್ಮಾ ನಾಯಕ್ (38), ಪುತ್ರಿ ವಿನಂತಿ (10) ಹಾಗೂ ಎಂಟು ವರ್ಷದ ಪುತ್ರ ಸಾವನ್ನಪ್ಪಿರುವ ದುರ್ದೈವಿಗಳು.
ಬೆಂಗಳೂರಿನ ಸ್ಪೈಕರ್ ಕಂಪೆನಿಯ ಉದ್ಯೋಗಿಯಾಗಿದ್ದ ವಿವೇಕ್‍ನಾಯಕ್ ಇಂದು ಬೆಳಗ್ಗೆ 8.30ರಲ್ಲಿ ಕುಟುಂಬದವರನ್ನು ಕಾರಿನಲ್ಲಿ ಕರೆದುಕೊಂಡು ಬೆಂಗಳೂರಿನಿಂದ ಹಾಸನ ಕಡೆಗೆ ಹೋಗುತ್ತಿದ್ದರು.
ವಿವೇಕ್ ನಾಯಕ್ ತಮ್ಮ ಕುಟುಂಬದೊಂದಿಗೆ ಕಾರ್ ನಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿದ್ದ ಕಟ್ಟಡಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಬೆಂಕಿ ಹೊತ್ತಿಕೊಂಡು ನಾಲ್ವರು ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಚನ್ನರಾಯಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೋಡನೋಡುತ್ತಿದ್ದಂತೆ ಕಾರು ಅಪಘಾತಕ್ಕೀಡಾದಾಗ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಿಸಲು ಓಡಿ ಬಂದರಾದರೂ ಪ್ರಯೋಜನವಾಗಿಲ್ಲ.
ಪರಿಣಾಮವಾಗಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡು ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ದಂಪತಿ ಹಾಗೂ ಪುತ್ರಿ ಸಜೀವ ದಹನವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪುತ್ರನ ಸ್ಥಿತಿ ಚಿಂತಾಜನಕವಾಗಿತ್ತು. ತಕ್ಷಣ ಈತನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಸುದ್ದಿ ತಿಳಿದ ಚನ್ನರಾಯಪಟ್ಟಣ ಠಾಣೆ ಎಸ್‍ಪಿ ಪ್ರಕಾಶ್‍ಗೌಡ ಹಾಗೂ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…