Featured

ಕಟ್ಟಡ ಕಾರ್ಮಿಕರಿಗಾಗಿ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ – vishwanews24

ಕಟ್ಟಡ ಕಾರ್ಮಿಕರಿಗಾಗಿ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ

ಬೆಂಗಳೂರು: ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.

ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.

ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.

ಇವೆಲ್ಲಾ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago