ಬೆಂಗಳೂರು: ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.
ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ ಎಂದರು.
ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.
ಇವೆಲ್ಲಾ ಸವಲತ್ತುಗಳನ್ನು ಕಾರ್ಮಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…
ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…
50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…
ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಪತ್ನಿ ಹೇಮಾ ಮಾಲಿನಿ ನವದೆಹಲಿ: ದಿವಂಗತ ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ…
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು ಪುತ್ತೂರು : ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ…