ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಶೀಘ್ರವೇ ಆನ್ ಲೈನ್ ವ್ಯವಸ್ಥೆ : ಯು.ಟಿ. ಖಾದರ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಶೀಘ್ರವೇ ಆನ್ ಲೈನ್ ವ್ಯವಸ್ಥೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ನಿರ್ಮಾಣ ಹಾಗೂ ಕಟ್ಟಡ ನಿರ್ಮಾಣ ಮಾಡುವ ನಕ್ಷೆಗೆ ಅನುಮೋದನೆ ನೀಡುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು.

ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಈ ಕುರಿತು ಮಾಹಿತಿ ನೀಡಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಅನುಮೋದನೆ ಪಡೆಯುವ ಸಂಬಂಧ ಪ್ರತ್ಯೇಕ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗಿದ್ದು, ಅರ್ಜಿ ಸಲ್ಲಿಸಿದ ತಿಂಗಳೊಳಗೆ ಪರವಾನಿಗೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮೊಬೈಲ್ ಟವರ್ ಅಳವಡಿಕೆಗೆ ಸ್ಥಳೀಯ ಸಂಸ್ಥೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೊಸ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ

ಅದಕ್ಕೂ ಶುಲ್ಕ ವಿಧಿಸಲಾಗುವುದು ಎಂದು ಹೇಳಿದರು. ಶಾಲೆ, ಆಸ್ಪತ್ರೆಗಳಿಂದ ನಿರ್ದಿಷ್ಟ ದೂರದಲ್ಲಿರಬೇಕು. ಟವರ್‍ನಿಂದ ಉಂಟಾಗುವ ರೇಡಿಯೇಷನ್ ಪರಿಗಣಿಸಿ ಅನುಮತಿ ನೀಡಲಾಗುವುದು. ಈ ಸಂಬಂಧ ನೀತಿಯೊಂದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಪಿಜಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಕಾನೂನು ತರಲಾಗುವುದು.

ಪಿಜಿ ನಿವಾಸಿಗಳಿಗೆ ಭದ್ರತೆ ಹಾಗೂ ವಂಚನೆಯಾಗದಂತೆ ತಡೆಯುವ ಉದ್ದೇಶದಿಂದ ಹೊಸ ಕಾನೂನು ತರಲಾಗುತ್ತದೆ ಎಂದು ಹೇಳಿದರು.