ಬೆಂಗಳೂರು: ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲು ಶೀಘ್ರವೇ ಆನ್ ಲೈನ್ ವ್ಯವಸ್ಥೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ನಿರ್ಮಾಣ ಹಾಗೂ ಕಟ್ಟಡ ನಿರ್ಮಾಣ ಮಾಡುವ ನಕ್ಷೆಗೆ ಅನುಮೋದನೆ ನೀಡುವ ವ್ಯವಸ್ಥೆಯನ್ನು ಶೀಘ್ರವೇ ಜಾರಿಗೆ ತರಲಾಗುವುದು.
ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಈ ಕುರಿತು ಮಾಹಿತಿ ನೀಡಿದ್ದು, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಅನುಮೋದನೆ ಪಡೆಯುವ ಸಂಬಂಧ ಪ್ರತ್ಯೇಕ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗಿದ್ದು, ಅರ್ಜಿ ಸಲ್ಲಿಸಿದ ತಿಂಗಳೊಳಗೆ ಪರವಾನಿಗೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮೊಬೈಲ್ ಟವರ್ ಅಳವಡಿಕೆಗೆ ಸ್ಥಳೀಯ ಸಂಸ್ಥೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೊಸ ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ
ಅದಕ್ಕೂ ಶುಲ್ಕ ವಿಧಿಸಲಾಗುವುದು ಎಂದು ಹೇಳಿದರು. ಶಾಲೆ, ಆಸ್ಪತ್ರೆಗಳಿಂದ ನಿರ್ದಿಷ್ಟ ದೂರದಲ್ಲಿರಬೇಕು. ಟವರ್‍ನಿಂದ ಉಂಟಾಗುವ ರೇಡಿಯೇಷನ್ ಪರಿಗಣಿಸಿ ಅನುಮತಿ ನೀಡಲಾಗುವುದು. ಈ ಸಂಬಂಧ ನೀತಿಯೊಂದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಪಿಜಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತ್ಯೇಕ ಕಾನೂನು ತರಲಾಗುವುದು.
ಪಿಜಿ ನಿವಾಸಿಗಳಿಗೆ ಭದ್ರತೆ ಹಾಗೂ ವಂಚನೆಯಾಗದಂತೆ ತಡೆಯುವ ಉದ್ದೇಶದಿಂದ ಹೊಸ ಕಾನೂನು ತರಲಾಗುತ್ತದೆ ಎಂದು ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…