Featured

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ : ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ – Vishwanews24

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ : ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ – Vishwanews24

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, “ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ” ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕೆಂದು ಹೇಳಿ ನಮ್ಮ ಮನೆ ಬಾಗಿಲಿಗೆ ಬಂದ ಕಾಂಗ್ರೆಸ್‌ ನಾಯಕರು ಸರಕಾರದ ನೇತೃತ್ವ ವಹಿಸಿ ಎಂದರು. ಹಾಗಾದರೆ, ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ ಸಿದ್ದಸೂತ್ರಧಾರ” ಎಂದು ಪ್ರಶ್ನಿಸಿದ್ದಾರೆ.

“ನಾನು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ ಎನ್ನುತ್ತೀರಿ, ನಿಮ್ಮನ್ನು ಕರೆದವರು ಯಾರು? ನಾವೇನು ಎಲೆ-ಅಡಿಕೆ ಕೊಟ್ಟು ಆಹ್ವಾನ ಕೊಟ್ಟೆವಾ? ಬಂದು ಬೆಂಬಲದ ಭಿಕ್ಷೆ ಬೇಡಿದವರು ಯಾರು? ದೆಹಲಿ ನಾಯಕರು ನಮ್ಮ ಮನೆ ಬಾಗಿಲಲ್ಲಿ ನಿಂತಿದ್ದಾಗಲೇ ಮೈತ್ರಿಗೆ ಕುಣಿಕೆ ಬಿಗಿಯಲು ಯತ್ನಿಸಿದವರು ಯಾರು ಮಿಸ್ಟರ್‌ ಟರ್ಮಿನೇಟರ್?‌” ಎಂದು ಕೇಳಿದ್ದಾರೆ.

ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ, ನನ್ನ ಹಂತದಲ್ಲಿ ಅಲ್ಲ ಅನ್ನುತ್ತೀರಿ! ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಅವರ ಮಾತಿಗೇ ನಿಮ್ಮಲ್ಲಿ ಕಿಮ್ಮತ್ತಿಲ್ಲಾ? ಹಾಗಾದರೆ, ಸಿಎಲ್‌ಪಿಯನ್ನೇ ಅಡ್ಡಡ್ಡ ʼಸೀಳಿʼ ಬೆಂಬಲಿಗ ಶಾಸಕರು ಬಿಜೆಪಿಗೆ ಹೋಗಲು ದುಷ್ಪ್ರೇರಣೆ ಕೊಟ್ಟವರು ಯಾರು? ಎಂದು ಪ್ರಶ್ನಿಸಿದ್ದಾರೆ.

ವರಿಷ್ಠರು ತಂದ ಸರಕಾರವನ್ನೇ ತೆಗೆದಿರಿ, ಬಿಜೆಪಿ ಸರಕಾರ ಬರಲು ಕಾರಣರಾದಿರಿ. ಈಗ ಸುಳ್ಳಿಗೆ ಸುಳ್ಳು ಪೋಣಿಸುತ್ತಿದ್ದೀರಿ. ಬಿಜೆಪಿ ಸರಕಾರ ಬರಲು ಶಾಸಕರ ಟೀಂ ರೆಡಿ ಮಾಡಿದವರು ಯಾರು? ಇಷ್ಟೆಲ್ಲಾ ʼಸಿದ್ದಕಲೆʼ ಎಲ್ಲಿಂದ ಬಂತು ಮಿಸ್ಟರ್ ಸಿದ್ದಕಲಾನಿಪುಣಪ್ಪಾ!? ಎಂದು ಕೇಳಿದ್ದಾರೆ.

ಹೈಕಮಾಂಡ್ ನಿರ್ಧಾರಕ್ಕೂ ಗುನ್ನ, ಅಹಿಂದದ ಹೆಸರಿನಲ್ಲಿ ದಲಿತ ನಾಯಕರಾದ ಖರ್ಗೆ ಅವರಿಗೂ ಖೆಡ್ಡಾ, ಡಾ,ಪರಮೇಶ್ವರ ಅವರಿಗೆ ಸೋಲಿನ ಸುಳಿ, ಈಗ ನೋಡಿದರೆ; ʼಬಂಡೆʼಯ ಕೆಳಗೂ ಡೈನಾಮೈಟ್ ಇಡುತ್ತಿರುವ ಅನೈತಿಕ, ನೀಚ, ನಿಕೃಷ್ಟ, ಹೀನ ರಾಜಕಾರಣಕ್ಕೆ ನಾಂದಿ ಹಾಡಿರುವ ʼಪರಮಪಾತಕ ಪರಾಕಾಷ್ಠೆ ಯಾರು? ಎಂದು ಪ್ರಶ್ನಿಸಿದ್ದಾರೆ.

ಜೆಡಿಎಸ್‌ ಬಿಜೆಪಿಯ ಬಿ ಟೀಂ ಅನ್ನುತ್ತೀರಿ. ಹಾಗಾದರೆ; ಆಡಳಿತ ಪಕ್ಷದಲ್ಲೇ ಕೂತು ವಿರೋಧಿಗಳೊಂದಿಗೆ ಕುಮ್ಮಕ್ಕಾಗಿ ಬೆನ್ನಿಗಿರಿದ ʼಬ್ರೂಟಸ್‌ʼ ಯಾರು? ಮೈತ್ರಿ ಸರಕಾರಕ್ಕೆ ಮೊದಲ ದಿನದಿಂದಲೇ ಮಹೂರ್ತ ಇಟ್ಟವರು ಯಾರು? ಸ್ವಯಂಘೋಷಿತ ಅಹಿಂದ ನಾಯಕರೇ ನಿಮ್ಮೊಳಗಿದೆ ಕಾರ್ಕೋಟಕ ʼವಿಷʼ. ಆ ವಿಷವೇ ನಿಮಗೆ ಮುಳುವು ಎಂದು ಟೀಕಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago