ಕಡಂದಲೆ ದುರಂತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ : ಶಾಸಕ ಉಮಾನಾಥ ಕೋಟ್ಯಾನ್ -Vishwanews24

Featured, ದಕ್ಷಿಣ ಕನ್ನಡ

ಕಡಂದಲೆ ದುರಂತದಲ್ಲಿ ಮೃತರ ಕುಟುಂಬಕ್ಕೆ ಪರಿಹಾರ : ಶಾಸಕ ಉಮಾನಾಥ ಕೋಟ್ಯಾನ್ -Vishwanews24

ಮೂಡುಬಿದಿರೆ: ಕಡಂದಲೆಯಲ್ಲಿ ನಡೆದ ದುರಂತ ದುಃಖಕರ. ಘಟನೆಯ ಮಾಹಿತಿ ತಿಳಿಯುವಾಗ ನಾನು ಬೆಂಗಳೂರಿಗೆ ಹೋಗುತ್ತಿದ್ದ ಕಾರಣ ಸ್ಥಳಕ್ಕೆ ಭೇಟಿ ನೀಡಲಾಗಲಿಲ್ಲ. ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆಗೆ ಕರೆ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಹೇಳಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಈ ಕುರಿತು ಮಾತನಾಡಿದ್ದು, ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಅವರ ಗಮನಕ್ಕೂ ಈ ವಿಚಾರ ತಂದು, ಗರಿಷ್ಠ ಪರಿಹಾರ ಒದಗಿಸಲು ಪ್ರಯತ್ನಿಸುವೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.