Featured

ಕಡಬ: ಎದೆಹಾಲು ಉಣಿಸುವ ವೇಳೆ ಮಗು ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ – Vishwanews24

ಕಡಬ: ಎದೆಹಾಲು ಉಣಿಸುವ ವೇಳೆ ಮಗು ಆಕಸ್ಮಿಕ ಸಾವು: ಮಾನಸಿಕವಾಗಿ ನೊಂದ ತಾಯಿ ಆತ್ಮಹತ್ಯೆ

ಕಡಬ : ಎದೆಹಾಲು ಉಣಿಸುವ ವೇಳೆ ತನ್ನ ಹೆಣ್ಣುಮಗು ಆಕಸ್ಮಿಕವಾಗಿ ಮೃತಪಟ್ಟ ಕಾರಣದಿಂದ ಮಾನಸಿಕವಾಗಿ ನೊಂದ ತಾಯಿಯೂ ಆತ್ಮಹತ್ಯೆಗೆ ಶರಣಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದಲ್ಲಿ ನಡೆದಿದೆ.

ಕಡಬ ತಾಲೂಕಿನ ರಾಮಕುಂಜ ಗ್ರಾಮದ ವನಿತಾ (38) ಆತ್ಮಹತ್ಯೆ ಮಾಡಿಕೊಂಡವರು.

ವನಿತಾ ಅವರಿಗೆ ಮೂರು ವರ್ಷದ ಗಂಡು ಮಗು ಇದ್ದು, ಮೂರು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಎದೆಹಾಲು ಕೊಟ್ಟ ತಾಯಿ ವನಿತಾ ಅವರು ಮಗುವನ್ನು ತಕ್ಷಣ ಮಲಗಿಸಿದ ಕಾರಣ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ಇದರಿಂದ ವನಿತಾ ಅವರು ಮಾನಸಿಕವಾಗಿ ನೊಂದುಕೊಂಡು ಖಿನ್ನತೆಗೊಳಗಾಗಿದ್ದರು. ಇದಕ್ಕೆ ಚಿಕಿತ್ಸೆ ಕೊಡಿಸುವ ಸಲುವಾಗಿ ಪತಿಯು, ವನಿತಾ ಅವರನ್ನು ತಾಯಿ ಮನೆಯಾದ ರಾಮಕುಂಜದಲ್ಲಿ ಬಿಟ್ಟು ಹೋಗಿದ್ದರು. ಏಪ್ರಿಲ್​ 2ರಂದು ಮನೆಯವರೆಲ್ಲಾ ಹೊರಗೆ ಹೋಗಿದ್ದ ವೇಳೆ ಮನೆಯ ಕೋಣೆಯಲ್ಲಿ ಮರದ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವನಿತಾ ಅವರ ಸಹೋದರ ದಿವಾಕರ್​ ಕೆ ಎಂಬವರು ಕಡಬ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಕ್ಕಳ ಬಗ್ಗೆ ಎಚ್ಚರಿಕೆ ಅಗತ್ಯ: ಹಸುಗೂಸಿಗೆ ಎದೆಹಾಲು ಉಣಿಸಿದ ಬಳಿಕ ಅಥವಾ ಯಾವುದೇ ಫುಡ್ ಮಿಕ್ಸ್ ಕೊಟ್ಟ ಬಳಿಕ ಮಗುವಿನ ತೇಗು ಹೋಗಿದೆಯಾ ಅಂತ ತಾಯಿ ಗಮನಿಸದೇ ಇದ್ದರೆ ಎಂತಹ ಪರಿಣಾಮ ಆಗಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆಯಾಗಿದೆ. ಮಗುವಿಗೆ ಎದೆ ಹಾಲು ಅಥವಾ ಇನ್ಯಾವುದೇ ಆಹಾರ ನೀಡಿದ ಬಳಿಕ ಮಗುವನ್ನು ಒಂದಷ್ಟು ಹೊತ್ತು ತಿರುಗಾಡಿಸಬೇಕು. ಮಗು ತೇಗು ತೆಗೆದಿಲ್ಲವೆಂದರೆ ಮಗುವಿನ ಬೆನ್ನು ತಟ್ಟಿ ತೇಗು ತೆಗೆಸಬೇಕು. ಹಿಂದಿನ ಕಾಲದ ಹಿರಿಯರಿಗೆ ಈ ಪದ್ಧತಿ ಬಗ್ಗೆ ತಿಳಿವಳಿಕೆ ಇತ್ತು. ಆದರೆ ಈಗಿನವರಿಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಗು ಅಳುತ್ತಿದೆ ಎಂದು ಎದೆಹಾಲು ಕೊಟ್ಟು ಹಾಗೇ ಮಲಗಿಸುವುದು ಸರಿಯಲ್ಲ ಎನ್ನುತ್ತಾರೆ ಮಕ್ಕಳ ತಜ್ಞರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago