ಕಡಬ: ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ – Vishwanews24

Featured, ದಕ್ಷಿಣ ಕನ್ನಡ

ಕಡಬ: ಕಾಲೇಜು ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ,: ವಿದ್ಯಾರ್ಥಿನಿಯರ ಮೇಲೆ ಕಾಲೇಜು ಆವರಣದಲ್ಲಿ ಅಪರಿಚಿತ ವ್ಯಕ್ತಿಯೋರ್ವ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಾ.4ರ ಸೋಮವಾರದಂದು ಬೆಳಗ್ಗೆ ನಡೆದಿದೆ. ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಅಲಿನ ಸಿಬಿ, ಅರ್ಚನಾ, ಅಮೃತ ಎಂದು ಗುರುತಿಸಲಾಗಿದೆ.

ಕಡಬ ಸರಕಾರಿ ಕಾಲೇಜಿನ ಆವರಣದಲ್ಲಿ ಪರೀಕ್ಷಾ ತಯಾರಿ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಆರೋಪಿ ಅಬಿನ್​ ಆ್ಯಸಿಡ್ ದಾಳಿ ನಡೆಸಿದ್ದಾನೆ. ಆರೋಪಿ ಕೇರಳದ ಮಲ್ಲಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಎಂಬುದಾಗಿ ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ.

ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರದ ನೂತನ ಮಂಡಲ ಪದಾಧಿಕಾರಿಗಳ ನೇಮಕ – Vishwanews24

ಆರೋಪಿ ಮಾಸ್ಕ್, ಹ್ಯಾಟ್ ಹಾಕಿಕೊಂಡು ಬಂದು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಸದ್ಯ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗುತ್ತಿದೆ. ಹಾಗೂ ಆರೋಪಿ ಅಬಿನ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿ ಇನ್ನು 2-3 ದಿನಗಳಲ್ಲಿ ಬಿಜೆಪಿ ಹೈಕಮಾಂಡ್‌ಗೆ ರವಾನೆ : ಬಿ.ವೈ.ವಿಜಯೇಂದ್ರ – Vishwanews24

 

Leave a Reply