Featured

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ

ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ ಆಡಳಿತ ಸೂಚನೆ ನೀಡಿದೆ.

ಸ್ನಾನಘಟ್ಟ ಬಳಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಪರ್ಯಾಯ ವ್ಯವಸ್ಥೆಯಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಿತ್ಯ ಸಾವಿರಾರು ಭಕ್ತರು ಯಾವುದೇ ತೊಂದರೆಯಾಗದಂತೆ ದೇವರ ದರ್ಶನ ಪಡೆಯುತ್ತಿದ್ದಾರೆ.

ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ಪೊಲೀಸರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟದ ಮೇಲೆ ಆಡಳಿತ ನಿರಂತರ ನಿಗಾ ಇರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಪರ್ಯಾಯ ಸ್ನಾನ ವ್ಯವಸ್ಥೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ – vishwanews24

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…

1 day ago

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ – vishwanews24

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…

1 day ago

7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ – vishwanews24

 7 ಮಂದಿಯ ಭೀಕರ ಹತ್ಯೆ  : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್‌ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರ ಹೇಳಿಕೆ ಬೆಂಗಳೂರು:…

1 day ago

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…

1 day ago

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು – vishwanews24

ಗಂಗೊಳ್ಳಿ:  ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

1 day ago

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ : ಹೆಂಡತಿ ಮೇಲಿನ ಸಿಟ್ಟಿಗೆ ಪತಿಯಿಂದ ಏಳು ಜನರ ಕೊಲೆ – vishwanews24 https://wp.me/p9KQap-vaX

ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್‌ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…

2 days ago