ಕಡಬ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಿರುಷಷ್ಠಿ ಮಹೋತ್ಸವ ; ಅನ್ಯಧರ್ಮಿಯರ ಆಹ್ವಾನಕ್ಕೆ ಭಾರೀ ವಿರೋಧ – vishwanews24
ಕಡಬ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಕಿರುಷಷ್ಠಿ ಮಹೋತ್ಸವ ; ಅನ್ಯಧರ್ಮಿಯರ ಆಹ್ವಾನಕ್ಕೆ ಭಾರೀ ವಿರೋಧ
ಕಡಬ : ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಕಿರುಷಷ್ಠಿ ಮಹೋತ್ಸವಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.
ಡಿ.26ರ ವರೆಗೆ ನಡೆಯಲಿರುವ ಕಿರುಷಷ್ಠಿ ಮಹೋತ್ಸವದ ಧರ್ಮಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅತಿಥಿಗಳಾಗಿ ಶಿಷ್ಟಾಚಾರದಂತೆ ಅನ್ಯಧರ್ಮೀಯರನ್ನೂ ಆಹ್ವಾನಿಸಲಾಗಿದೆ.
ಶೀಘ್ರದಲ್ಲಿಯೇ ಗೃಹಲಕ್ಷ್ಮೀ 24ನೇ ಕಂತಿನ ಹಣ ಬಿಡುಗಡೆ : ಲಕ್ಷ್ಮೀ ಹೆಬ್ಬಾಳ್ಕರ್ – vishwanews24
ಹಿಂದೂ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮೀಯರನ್ನ ಆಹ್ವಾನಿಸಿರೋದು ಸರಿಯಲ್ಲ, ತಕ್ಷಣ ಅದನ್ನ ತಡೆಯಬೇಕೆಂದು ಕ್ಷೇತ್ರ ಸಂರಕ್ಷಾ ವೇದಿಕೆಯಿಂದ ಕ್ಷೇತ್ರದ ಆಡಳಿತಾಧಿಕಾರಿಗೆ ಮನವಿ ನೀಡಲಾಗಿದೆ.
ಆಹ್ವಾನ ವಾಪಸ್ ಪಡೆಯದೇ ಇದ್ದರೆ ಡಿ.22 ರಂದು ಆಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸೋ ಎಚ್ಚರಿಕೆ ನೀಡಲಾಗಿದೆ. ಕುಕ್ಕೆ ಕ್ಷೇತ್ರ ಮುಜರಾಯಿ ಇಲಾಖೆಯ ಅಧೀನದಲ್ಲಿ ಇರುವುದರಿಂದ ಸರ್ಕಾರದ ಶಿಷ್ಟಾಚಾರ ಪ್ರಕಾರ ಎಲ್ಲರನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಅನ್ಯಧರ್ಮಿಯರಾದ ಸ್ಪೀಕರ್ ಯು.ಟಿ.ಖಾದರ್, ಎಂಎಲ್‌ಸಿ ಐವನ್ ಡಿಸೋಜಾ, ಬ್ಯಾರಿ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಫೂರ್, ಕನಿಷ್ಠ ವೇತಾತ ಸಲಹಾ ಮಂಡಳಿ ಅಧ್ಯಕ್ಷ ಶಹೀದ್ ತೆಕ್ಕಿಲ್, ಕೊಂಕಣಿ ಸಾಹಿತ್ಯ ಅಕಾಡಮಿಯ ಜೋಕಿಂ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಪಿಂಟೋಗೆ ಆಹ್ವಾನ ನೀಡಲಾಗಿದೆ.
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ: ದಲಿತ ಯುವಕನನ್ನು ಮದುವೆಯಾಗಿದ್ದ ಮಗಳನ್ನು ಕೊಲೆಗೈದ ಪೋಷಕರು – vishwanews24
