Featured

ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ  ..!Vishwanews24

ಕಡಬ: ಮೃತ ಮೊಸಳೆ ಹೊಟ್ಟೆಯಲ್ಲಿ 1 ಕೆಜಿಗೂ ಹೆಚ್ಚು ಪ್ಲಾಸ್ಟಿಕ್ ಪತ್ತೆ; ಆಘಾತಕಾರಿ ವರದಿ ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಪುತ್ತೂರು : ಇತ್ತೀಚೆಗೆ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ ಎಂದು ಆಘಾತಕಾರಿ ವರದಿ ಮರಣೋತ್ತರ ಪರೀಕ್ಷೆಯ ವೇಳೆ ದೃಢಪಟ್ಟಿದೆ.

ಕಡಬ – ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಏನೆಕಲ್ಲು ನರ್ಸರಿ ಪ್ರದೇಶದಲ್ಲಿ ಮೊಸಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಮರಣೋತ್ತರ ಪರೀಕ್ಷೆ ನಡೆಸುವಾಗ ಮೊಸಳೆಯ ಹೊಟ್ಟೆಯಲ್ಲಿ 1 ಕೆಜಿಗೂ ಅಧಿಕ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ ಹೊಟ್ಟೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ದ ಕೋಳಿ ತ್ಯಾಜ್ಯ, ಮಕ್ಕಳಿಗೆ ಬಳಸುವ ಪ್ಯಾಡ್‌ಗಳು ಪತ್ತೆಯಾಗಿತ್ತು. ಈ ತ್ಯಾಜ್ಯ ಮೊಸಳೆಯ ಹೊಟ್ಟೆಯಲ್ಲಿ ಜೀರ್ಣಗೊಳ್ಳದೇ ಅನಾರೋಗ್ಯದಿಂದ ಮೊಸಳೆ ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago