Featured

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಮನನೊಂದು ಕೃಷಿಕ ಆತ್ಮಹತ್ಯೆ – Vishwanews24

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಮನನೊಂದು ಕೃಷಿಕ ಆತ್ಮಹತ್ಯೆ

ಕಡಬ : ಕೃಷಿಗಾಗಿ ಮಾಡಿಕೊಂಡ ಸಾಲ ಮರುಪಾವತಿಸಲು ಸಾಧ್ಯವಾಗದೆ ಹತಾಶೆಗೊಂಡ ಕೃಷಿಕ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ದಕ್ಷಿಣ ಕನ್ನಡದ ಕಡಬದಲ್ಲಿ ನಡೆದಿದೆ.

ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಬುಡಲೂರು ಎಂಬಲ್ಲಿ ಈ ಘಟನೆ ನಡೆದಿದ್ದು ಬೂಡಲೂರು ನಿವಾಸಿ ಶಿವಣ್ಣ ಗೌಡ(61ವ.)ಆತ್ಮಹತ್ಯೆ ಮಾಡಿಕೊಂಡ ಕೃಷಿಕರಾಗಿದ್ದಾರೆ. ತಮ್ಮ ಮನೆಯಿಂದ ಅನತಿ ದೂರದ ಗುಡ್ಡೆಯೊಂದರಲ್ಲಿ ಶಿವಣ್ಣ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಣ್ಣ ಗೌಡ ಅವರು ಸ್ಥಳೀಯ ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನಲ್ಲಿ ಕೃಷಿ ಚಟುವಟಿಕೆಗಾಗಿ ರೂ.10 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಎನ್ನುವ ಕೊರಗಿನಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪುತ್ರ ಹೇಮಂತ್ ಅವರು ಕಡಬ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

20 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

20 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

20 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago