ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಹಣ ಪಡೆದು ವಂಚನೆ ಮಾಡಲು ಯತ್ನಿಸಿದ್ದ ಇಬ್ಬರನ್ನು ಕಡಬ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಜುಲೈ 3ರಂದು ಸಂಜೆ ಕಡಬ ಪೇಟೆಯಲ್ಲಿ ಇಬ್ಬರು ವ್ಯಕ್ತಿಗಳು ಸಂಶಯಾಸ್ಪದವಾಗಿ ಓಡಾಡುತ್ತಿರುವ ಕುರಿತು ಮಾಹಿತಿ ಪಡೆದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಅವರನ್ನು ವಿಚಾರಣೆ ನಡೆಸಿದರು. ಈ ವೇಳೆ ಬ್ಯಾಂಕ್‌ನಲ್ಲಿ ಸುಮಾರು 120 ಗ್ರಾಂ ಚಿನ್ನಾಭರಣವನ್ನು ಅಡವಿಡಲು ಬಂದಿರುವುದಾಗಿ ಅವರು ತಿಳಿಸಿದ್ದರು. ಅವರ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಠಾಣೆಗೆ ಕರೆತಂದರು.
ವಿಚಾರಣೆಯಲ್ಲಿ ಆರೋಪಿಗಳು ಉಪ್ಪಿನಂಗಡಿ ನಿವಾಸಿ ಮಹಮ್ಮದ್ ಫಾಯಿಝ್ (20) ಹಾಗೂ ಬಂಟ್ವಾಳ ಕಸಬಾ ನಿವಾಸಿ ಮೊಹಮ್ಮದ್ ಮುರ್ಷೀದ್ (45) ಎಂದು ಗುರುತಿಸಲಾಗಿದೆ.
ಅವರ ಬಳಿಯಿದ್ದ ಚಿನ್ನಾಭರಣಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ಆರೋಪಿಗಳು ಒದಗಿಸದಿದ್ದು, ಸಮರ್ಪಕ ಮಾಹಿತಿಯನ್ನೂ ನೀಡಲಿಲ್ಲ. ಬಳಿಕ ನಡೆಸಿದ ವಿಚಾರಣೆಯಲ್ಲಿ ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ ಬ್ಯಾಂಕ್‌ನಲ್ಲಿ ಅಡವಿಟ್ಟು ಬ್ಯಾಂಕ್‌ಗೆ ವಂಚನೆ ಎಸಗಿ ಹಣ ಪಡೆಯುವ ಉದ್ದೇಶದಿಂದ ಬಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 83/2026ರಡಿ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ 318(4) ಹಾಗೂ 62ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]