ಕಡಬ: ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ. 26ರಂದು ನಡೆದಿದೆ.
ಕೊಣಾಲು ಗ್ರಾಮದ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು ಕುಳದ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ. 26ರ ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಿಗದಿಯಾಗಿದ್ದು. ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ದಾರೆ ಸೀರೆ ಹಾಗೂ ಶೃಂಗಾರದೊಂದಿಗೆ ಮದುವೆ ಮಂಟಪಕ್ಕೆ ಬಂದಿದ್ದ ವಧು ಸರಸ್ವತಿ ಹಾಗೂ ವರ ಉಮೇಶ ಪರಸ್ಪರ ಹೂಮಾಲೆ ಹಾಕಿಸಿಕೊಂಡಿದ್ದರು ಇನ್ನು ವರ ಉಮೇಶ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ಸರಸ್ವತಿ ಈ ಮದುವೆ ನನಗೆ ಇಷ್ಟ ಇಲ್ಲ ಎಂದು ಹೇಳಿ ತಾಳಿ ಕಟ್ಟಲು ಅವಕಾಶ ನೀಡಲಿಲ್ಲ. ಇದರಿಂದ ಎರಡೂ ಕಡೆಯವರೂ ವಿಚಲಿತಗೊಂಡು ಈ ವೇಳೆ ಹಿರಿಯರು ವಧುವಿನ ಮನವೊಲಿಕೆಗೆ ಮುಂದಾದರೂ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿರುವುದರಿಂದ ಬಳಿಕ ಎರಡೂ ಕಡೆಯವರೂ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.
ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯಕ್ಕೆ ಪಶ್ಚಾತ್ತಾಪ ಪಟ್ಟು ಉಮೇಶ ಅವರನ್ನು ಮದುವೆಯಾಗಲು ಒಪ್ಪಿಗೆ ಸೂಚಿಸಿದರು. ಆದರೆ ಆಗ ವರ ಉಮೇಶ್ ಅವರು ಮದುವೆಯಾಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…