Featured

ಕಡಬ:  ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಆರೋಪಿ ಅರೆಸ್ಟ್ – vishwanews24

ಕಡಬ:  ಪ್ರೀತಿಸುವ ನಾಟಕವಾಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ,ಬ್ಲ್ಯಾಕ್ ಮೇಲ್ : ಆರೋಪಿ ಅರೆಸ್ಟ್

ಕಡಬ: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್‌ ನಿವಾಸಿ ಪ್ರವೀಣ್‌ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್‌ವೆುಲ್‌ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸೋಮವಾರ ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಕರೆದೊಯ್ದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ. ಮರುದಿನ ರೂಂನಲ್ಲಿ ಇರುವಾಗಲೇ ಬಾಲಕಿ ಜತೆ ತಗಾದೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಬೈಕಿನಲ್ಲಿ ಕರೆದೊಯ್ದು ಫರಂಗಿಪೇಟೆ ಬಳಿ ರಸ್ತೆ ಬದಿ ಬಿಟ್ಟು ಹೋಗಿದ್ದ. ಮನೆಯವರಿಗೆ ವಿಷಯ ತಿಳಿಸಿದ್ದ ಬಾಲಕಿಗೆ ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆದುಕೊಂಡು ಬಂದಿದ್ದರು.

ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

22 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

22 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

23 hours ago