Featured

ಕಡಬ: ಬೈಕ್ ಅಪಘಾತ ; 10ನೇ ತರಗತಿ ವಿದ್ಯಾರ್ಥಿ ಸಾವು – vishwanews24

ಕಡಬ: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಬೈಕ್; 10ನೇ ತರಗತಿ ವಿದ್ಯಾರ್ಥಿ ಸಾವು

ಕಡಬ: ಸವಾರನ ನಿಯಂತ್ರಣ ತಪ್ಪಿ ಬೈಕ್ ಮೋರಿಗೆ ಬಿದ್ದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ – ಮರ್ಧಾಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಡ್ಕ ಸಮೀಪದ ಗರ್ಗಾಸ್‌ಪಾಲ್‌ನಲ್ಲಿ ಶುಕ್ರವಾರ ನಡೆದಿದೆ.

ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಅವರ ಪುತ್ರ ಆಶಿಷ್ (16) ಮೃತ ವಿದ್ಯಾರ್ಥಿ. ಆಶಿಷ್ ಪೇರಡ್ಕದ ಖಾಸಗಿ ವಿದ್ಯಾಸಂಸ್ಥೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೃತ ಆಶಿಷ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

ಆಶಿಷ್ ಬೆಳಗ್ಗೆ ಮನೆಯಿಂದ ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳೀಯ ನಿವಾಸಿ ಶ್ರೀಧರ ಅವರು ಕೂಡಲೇ ಆತನನ್ನು ಮೇಲಕ್ಕೆತ್ತಿ ಕಡಬದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅವರ ಪ್ರಯತ್ನ ಫಲಕಾರಿಯಾಗಲಿಲ್ಲ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರ್‌ಟಿಒ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಅಪ್ರಾಪ್ತರು ಹಾಗೂ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಅಪ್ರಾಪ್ತರ ಕೈಲಿ ಬೈಕ್ ನೀಡಿದ ಪೋಷಕರ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.

ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ವಿದ್ಯಾರ್ಥಿಗಳು ತಾರದಂತೆ ಶಾಲಾ ಮುಖ್ಯೋಪಾಧ್ಯಯರು ಮತ್ತು ಪ್ರಾಂಶುಪಾಲರು ಸೂಚನೆ ನೀಡಬೇಕು ಹಾಗೂ ಪೋಷಕರಿಗೆ ಈ ಬಗ್ಗೆ ಸೂಚನೆ ನೀಡಬೇಕು.

ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಆಡಳಿತ ಹಾಗೂ ಮುಖ್ಯಸ್ಥರನ್ನೇ ಹೊಣೆಯಾಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಡಬ , ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

Vishwa News 24

Recent Posts

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

5 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

15 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

24 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago