ಕಡಬ: ಸವಾರನ ನಿಯಂತ್ರಣ ತಪ್ಪಿ ಬೈಕ್ ಮೋರಿಗೆ ಬಿದ್ದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಧರ್ಮಸ್ಥಳ – ಮರ್ಧಾಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಪೇರಡ್ಕ ಸಮೀಪದ ಗರ್ಗಾಸ್‌ಪಾಲ್‌ನಲ್ಲಿ ಶುಕ್ರವಾರ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಅವರ ಪುತ್ರ ಆಶಿಷ್ (16) ಮೃತ ವಿದ್ಯಾರ್ಥಿ. ಆಶಿಷ್ ಪೇರಡ್ಕದ ಖಾಸಗಿ ವಿದ್ಯಾಸಂಸ್ಥೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮೃತ ಆಶಿಷ್ ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.
ಆಶಿಷ್ ಬೆಳಗ್ಗೆ ಮನೆಯಿಂದ ಶಾಲೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳೀಯ ನಿವಾಸಿ ಶ್ರೀಧರ ಅವರು ಕೂಡಲೇ ಆತನನ್ನು ಮೇಲಕ್ಕೆತ್ತಿ ಕಡಬದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಅವರ ಪ್ರಯತ್ನ ಫಲಕಾರಿಯಾಗಲಿಲ್ಲ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರ್‌ಟಿಒ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಪತ್ರ ಬರೆದು ಅಪ್ರಾಪ್ತರು ಹಾಗೂ ಪರವಾನಿಗೆ ಇಲ್ಲದೆ ಬೈಕ್ ಚಲಾಯಿಸುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಅಪ್ರಾಪ್ತರ ಕೈಲಿ ಬೈಕ್ ನೀಡಿದ ಪೋಷಕರ ವಿರುದ್ಧ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದಾರೆ.
ಶಾಲಾ ಕಾಲೇಜುಗಳಿಗೆ ದ್ವಿಚಕ್ರ ವಾಹನ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ವಿದ್ಯಾರ್ಥಿಗಳು ತಾರದಂತೆ ಶಾಲಾ ಮುಖ್ಯೋಪಾಧ್ಯಯರು ಮತ್ತು ಪ್ರಾಂಶುಪಾಲರು ಸೂಚನೆ ನೀಡಬೇಕು ಹಾಗೂ ಪೋಷಕರಿಗೆ ಈ ಬಗ್ಗೆ ಸೂಚನೆ ನೀಡಬೇಕು.
ಮತ್ತೊಮ್ಮೆ ಇಂತಹ ಘಟನೆ ಮರುಕಳಿಸಿದರೆ ಶಾಲೆಯ ಆಡಳಿತ ಹಾಗೂ ಮುಖ್ಯಸ್ಥರನ್ನೇ ಹೊಣೆಯಾಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಡಬ , ಸುಬ್ರಹ್ಮಣ್ಯ, ಬೆಳ್ಳಾರೆ, ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿಗಳಿಗೆ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…