Featured

ಕಡಬ: ಬೈಕ್ ಮತ್ತು ಮಿನಿ ಗೂಡ್ಸ್ ವಾಹನ  ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

ಕಡಬ: ಬೈಕ್ ಮತ್ತು ಮಿನಿ ಗೂಡ್ಸ್ ವಾಹನ  ಡಿಕ್ಕಿ; ಕಾಲೇಜು ವಿದ್ಯಾರ್ಥಿ ಮೃತ್ಯು

ಕಡಬ :  ಬೈಕ್ ಮತ್ತು ಮಿನಿ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಪದವಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಬಳಿ ಮಾ. 4 ರಂದು ನಡೆದಿದೆ.

ಪುತ್ತೂರು ಖಾಸಗಿ ಕಾಲೇಜಿನಲ್ಲಿ ಅಂತಿಮ ಬಿ.ಎ. ಪದವಿ ವ್ಯಾಸಂಗ ಮಾಡುತ್ತಿರುವ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಶ್ರೀಜಿಸ್ (20) ಮೃತ ವಿದ್ಯಾರ್ಥಿ.

ಶ್ರೀಜಿಸ್ ಅವರು ರಾಮಕುಂಜ ಶಾರದಾ ನಗರದಲ್ಲಿರುವ ತಮ್ಮ ಚಿಕ್ಕಮ್ಮನ ಮನೆಗೆ ತೆರಳಿ, ಅಲ್ಲಿಂದ ಉಪ್ಪಿನಂಗಡಿ ಕಡೆಗೆ ಹಿಂತಿರುಗುತ್ತಿದ್ದ ವೇಳೆಗೆ ಈ ದುರ್ಘಟನೆ ನಡೆದಿದೆ. ಶ್ರೀಜಿಸ್ ಅವರು ಆಲಂಕಾರು ಬಳಿಯ ಪೆಟ್ರೋಲ್ ಪಂಪ್‌ ಒಂದರಲ್ಲಿ ಬೈಕ್‌ಗೆ ಪೆಟ್ರೋಲ್ ತುಂಬಿಸಿ ಹಿಂತಿರುಗುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಿನಿ ಗೂಡ್ಸ್ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶ್ರೀಜಿಸ್ ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

1 hour ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

1 hour ago

ಉಡುಪಿ ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಕ್ಕೆ ಲೈಸನ್ಸ್ : ಅರ್ಜಿ ಸಲ್ಲಿಸಲು ಅ.26 ಕೊನೆಯ ದಿನ – vishwanews24

ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…

2 hours ago

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ – vishwanews24

ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…

2 hours ago

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…

2 hours ago

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ ಮಣಿಪಾಲ: ಕಂಪೆನಿ ಕ್ಯು ಆರ್‌ಕೋಡ್ ಬಳಸದೆ ಮರ್ಚೆಂಟ್…

2 hours ago