ಕಡಬ : ಕುಕ್ಕೆ ಸುಬ್ರಹ್ಮಣ್ಯ ಭಾಗದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮಳೆಯಿಂದಾಗಿ ಸುಬ್ರಹ್ಮಣ್ಯದ ದರ್ಪಣ ತೀರ್ಥ ಉಕ್ಕಿ ಹರಿಯುತ್ತಿದೆ. ಈ ಕಾರಣದಿಂದಾಗಿ ಮುಂದಿನ ಎರಡು ದಿನಗಳ ಕಾಲ ಭಕ್ತರು ಸುಬ್ರಹ್ಮಣ್ಯ ಕ್ಷೇತ್ರದತ್ತ ತೆರಳದಂತೆ ಸಹಕರಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮನವಿ ಮಾಡಿಕೊಂಡಿದ್ದಾರೆ.
ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಸಣ್ಣಪುಟ್ಟ ಸೇತುವೆಗಳು ಮುಳುಗಡೆಯಾಗಿದೆ. ಕ್ಷೇತ್ರ ಪರಿಸರದಾದ್ಯಂತ ಮನೆ, ಅಂಗಡಿಗಳು ಜಲಾವೃತವಾಗಿವೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತರು ಪರದಾಡುತ್ತಿದ್ದಾರೆ. ಮುಂದಿನ ಎರಡು ದಿನಗಳ ಕಾಲ ಭಕ್ತರು ಕ್ಷೇತ್ರಕ್ಕೆ ತೆರಳದಂತೆ ಭಕ್ತರಲ್ಲಿ ಡಿಸಿ ರಾಜೇಂದ್ರ ಕೆ.ವಿ. ಮನವಿ ಮಾಡಿಕೊಂಡಿದ್ದಾರೆ.
ಇನ್ನು ಮಂಗಳವಾರದಂದು ನಾಗರ ಪಂಚಮಿ ಆಚರಿಸಲಾಗುತ್ತಿದ್ದು, ನಾಗಕ್ಷೇತ್ರದತ್ತ ಭಕ್ತರ ದಂಡು ಹರಿದು ಬರುತ್ತದೆ. ಲಕ್ಷಾಂತರ ಭಕ್ತರು ನಾಗರಪಂಚಮಿ ಧಾರ್ಮಿಕ ವಿಧಿಯಲ್ಲಿ ಭಾಗವಹಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…