Featured

ಕಡಬ: ಯುವಕ ನಾಪತ್ತೆ ಪ್ರಕರಣಕ್ಕೆ ತಿರುವು: ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ – vishwanews24

ಕಡಬ: ಯುವಕ ನಾಪತ್ತೆ ಪ್ರಕರಣಕ್ಕೆ ತಿರುವು: ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ

ಕಡಬ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಯುವಕನನ್ನು ಆತನ ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ ಕಡಬ ತಾಲೂಕಿನ ನೆಟ್ಟಣ ಸಮೀಪ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಮುಂಗ್ಲಿಮಜಲು ನಿವಾಸಿ ದಿ.ಶಾಂತಪ್ಪ ಗೌಡ ಎಂಬವರ ಪುತ್ರ ಸಂದೀಪ್ ಗೌಡ (29) ಅವರ ಮೃತದೇಹ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಸುಮಾರು ಒಂದೂವರೆ ಕಿ.ಮೀ. ದೂರದ ನಾರಡ್ಕ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದೆ.

ಸಂದೀಪ್‌ನನ್ನು ಆತನ ಸ್ನೇಹಿತ ನೆಟ್ಟಣ ನಿವಾಸಿ ಪ್ರತೀಕ್ ನೆಟ್ಟಣ ಎಂಬಾತ ರೈಲು ನಿಲ್ದಾಣದ ಬಳಿಯ ಗುಡ್ಡೆಯಲ್ಲಿ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆಗೈದು ಮೃತದೇಹವನ್ನು ಕಾಡಿನೊಳಗೆ ಕೊಂಡೊಯ್ದು ಸುಟ್ಟುಹಾಕಲು ಯತ್ನಿಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ.

ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದ ಸಂದೀಪ್ ನ. 27 ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ತೆರಳಿದ್ದು, ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ. ಈ ಬಗ್ಗೆ ವಿನಯ ಅವರಲ್ಲಿ ಸಂದೀಪ್‌ನ ತಾಯಿ ಸರೋಜ ಅವರು ವಿಚಾರಿಸಿದಾಗ ಸಂದೀಪ್ ಸಂಜೆ ಕೆಲಸ ಮುಗಿಸಿ ನೆಟ್ಟಣ ನಿವಾಸಿ ಪ್ರತೀಕ್ ಎಂಬಾತನೊಂದಿಗೆ ಆತನ ಕಾರಿನಲ್ಲಿ ಹೋಗಿರುವುದಾಗಿ ಮಾಹಿತಿ ನೀಡಿದ್ದರು. ಹುಡುಕಾಡಿ ಎಲ್ಲೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜ ಅವರು ಕಡಬ ಠಾಣೆಗೆ ದೂರು ನೀಡಿದ್ದರು. ಅದರಂತೆ ಸಂದೀಪ್‌ನನ್ನು ಕಾರಿನಲ್ಲಿ ಕರೆದೊಯ್ದಿದ್ದ ಪ್ರತೀಕ್ ಹಾಗೂ ಇನ್ನೋರ್ವನನ್ನು ಪೊಲೀಸರು ರವಿವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆಯ ರಹಸ್ಯ ಬಯಲಾಗಿದೆ. ಕೊಲೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

ಕೊಲೆಗೀಡಾದ ಸಂದೀಪ್‌ನ ಮೃತದೇಹವನ್ನು ಸುಟ್ಟು ಹಾಕಲು ಯತ್ನಿಸಿದ್ದ ಸ್ಥಳಕ್ಕೆ ಸೋಮವಾರ ಸಂಜೆ ಆರೋಪಿ ಪ್ರತೀಕ್‌ನನ್ನು ಪೊಲೀಸರು ಕರೆದೊಯ್ಯುತ್ತಿದ್ದ ವೇಳೆ ಆರೋಪಿಯನ್ನು ನಮ್ಮ ವಶಕ್ಕೆ ನೀಡಿ ಎಂದು ಸ್ಥಳೀಯರು ಪೊಲೀಸ್ ವಾಹನವನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ಕೊಲೆಗೈದು ಮೃತದೇಹವನ್ನು ಕಾಡಿಗೆ ಸಾಗಿಸಲು ಒಬ್ಬನಿಂದ ಸಾಧ್ಯವಿಲ್ಲ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಸಾಧ್ಯತೆಗಳಿದ್ದು, ಉಳಿದ ಆರೋಪಿಗಳನ್ನೂ ಬಂಧಿಸುವಂತೆ ಸ್ಥಳೀಯರು ಆಗ್ರಹಿಸಿದರು.

ಸಂದೀಪ್ ನಾಪತ್ತೆ ಆದ ಮರುದಿನವೇ ಕಾರ್ತಿಕ್‌ ಎಂಬಾತನ ವಿರುದ್ಧ ಅನುಮಾನ ವ್ಯಕ್ತಪಡಿಸಿ ಸಂದೀಪ್ ನ ತಾಯಿ ಕಡಬ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ದೂರು ಸ್ವೀಕರಿಸಿಲ್ಲ ಎಂಬ ಆರೋಪ ವ್ಯಕ್ತಪಡಿಸಿ ಸೋಮವಾರ ಮಧ್ಯಾಹ್ನದ ವೇಳೆಗೆ ಬಿಳಿನೆಲೆ ಗ್ರಾಮಸ್ಥರು ಕಡಬ ಠಾಣೆಯ ಬಳಿ ಜಮಾಯಿಸಿದ್ದರಲ್ಲದೆ ಕಡಬ ಠಾಣಾ ಸಬ್ ಇನ್ಸ್‌ಪೆಕ್ಟರ್ ಅಭಿನಂದನ್ ಹಾಗೂ ಹೆಡ್ ಕಾನ್ಸ್‌ಟೇಬಲ್ ರೋಹಿತಾಕ್ಷ ಎಂಬವರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದ್ದರು.

ಈ ವೇಳೆ ಕಡಬ ಠಾಣೆಗೆ ಆಗಮಿಸಿದ್ದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ರಾಜೇಂದ್ರ ಡಿ.ಎಸ್. ಸ್ಥಳೀಯರನ್ನು ಸಮಾಧಾನಪಡಿಸಿ, ತಪ್ಪಿತಸ್ಥರಿಗೆ ಕಾನೂನು ರೀತಿಯಲ್ಲಿ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

Vishwa News 24

Recent Posts

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ ಉದ್ಘಾಟನೆ – vishwanews24

ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…

2 hours ago

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಅಭಿಷೇಕ್ ಪೂಜಾರಿ ಸಾವು – vishwanews24

ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್‌ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…

3 hours ago

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ – vishwanews24

ಅಮೆರಿಕದ ಪ್ರತಿಷ್ಠಿತ  ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್‌: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…

5 hours ago

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ – vishwanews24

ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…

5 hours ago

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ – vishwanews24

ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…

5 hours ago

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು : ಯತೀಂದ್ರ ಸಿದ್ದರಾಮಯ್ಯ – vishwanews24

2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…

5 hours ago