ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ : ಇನ್ನಿಬ್ಬರು ಪೊಲೀಸರ ವಶಕ್ಕೆ – Vishwanews24
ಕಡಬ: ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ : ಇನ್ನಿಬ್ಬರು ಪೊಲೀಸರ ವಶಕ್ಕೆ
ಕಡಬ: ಕಡಬದ ಸರ್ಕಾರಿ ಕಾಲೇಜಿನಲ್ಲಿ ನಡೆದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಕೇರಳದ ಇನ್ನಿಬ್ಬರನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಧಾನ ಆರೋಪಿ ಕೇರಳ ಮೂಲದ ಎಂಬಿಎ ವಿದ್ಯಾರ್ಥಿ ಅಭಿನ್ ನನ್ನು ಮಾ. ೫ರಂದು ಬಂಧಿಸಲಾಗಿತ್ತು. ಉಪ್ಪಿನಂಗಡಿ ವೃತ್ತ ನಿರೀಕ್ಷಕರ ನೇತೃತ್ವದ ತಂಡ ಪ್ರಧಾನ ಆರೋಪಿ ಜತೆ ಕೇರಳದ ಎರ್ನಾಕುಲಂ ಮತ್ತು ತಮಿಳುನಾಡಿನ ಕೊಯಮತ್ತೂರಿನ ಪ್ರದೇಶಕ್ಕೆ ತೆರಳಿ ತನಿಖೆ ನಡೆಸಲಾಗಿತ್ತು. ಇದೀಗ ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಕಡಬಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ.
ಕಾಪು : ದಿನಸಿ ಸೇಲ್ಸ್ ಮೆನ್ ನ ಪರ್ಸ್ ಎಗರಿಸಿ ಲಕ್ಷಾಂತರ ರೂ. ದರೋಡೆ ಪ್ರಕರಣ ; ಆರೋಪಿ ಬಂಧನ – Vishwanews24
ಆರೋಪಿ ಅಬಿನ್ ಆಸಿಡ್ ದಾಳಿ ನಡೆಸಿದ ದಿನ ಕಾಲೇಜಿನ ಸಮವಸ್ತ್ರ ಹೋಲುವ ಡ್ರೆಸ್ ಹಾಕಿದ್ದು, ಇದನ್ನು ಹೊಲಿದುಕೊಟ್ಟ ವ್ಯಕ್ತಿ ಹಾಗೂ ಆಸಿಡ್ ನೀಡಿದ ವ್ಯಕ್ತಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಈ ನಡುವೆ ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದೆ.
ಉಡುಪಿ: ಜಯ ಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್‌ಗೆ ಸೇರ್ಪಡೆ – Vishwanews24
