ಕಡಬ : ಸಾಯುವ ಕುರಿತಾಗಿ ವಾಟ್ಸಪ್ ಸ್ಟೇಟಸ್ ಹಾಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ – Vishwanews24

Featured, ದಕ್ಷಿಣ ಕನ್ನಡ

ಕಡಬ : ಸಾಯುವ ಕುರಿತಾಗಿ ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

ಕಡಬ : ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ‌ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

ಮಾ.30ರ ತಡರಾತ್ರಿ ಈ ಘಟನೆ ನಡೆದಿದ್ದು ಮೃತ ಯುವಕ ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.

ಕಡಬ : ವಾಟ್ಸಾಪ್‌ ಸ್ಟೇಟಸ್ ಹಾಕಿ ಯುವಕ‌ ಆತ್ಮಹತ್ಯೆ..!!! – Zoomin Tv

ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ.ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ ಹೋಗುತ್ತಿದ್ದ. ನಿನ್ನೆಯೂ ಕೂಡ ಕೆಲಸಕ್ಕೆ ಹೋಗಿದ್ದ ಎನ್ನಲಾಗಿದೆ.

ಒಬ್ಬಂಟಿಯಾಗಿದ್ದರಿಂದ ಮಾನಸಿಕವಾಗಿಯೂ ನೊಂದಿದ್ದ ಎನ್ನಲಾಗಿದೆ.ಕಳೆದ ರಾತ್ರಿ ರೆನೀಶ್ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್ ನ ಸ್ಟೇಟಸ್ ನಲ್ಲಿ ಬರೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಉಳ್ಳಾಲ : ಕೋಟೆಕಾರ್ ಅಜ್ಜನ ಕಟ್ಟೆಯಿಂದ ಕಳವಾದ ಬೈಕ್ : ಎರಡು ದಿನಗಳ ಒಳಗೆ ಬೈಕ್ ಪತ್ತೆ :- ಕಾರಣಿಕ ಮೆರೆದ ಕೊರಗಜ್ಜ – VIshwanews24

ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Leave a Reply