ಕಡಬ: ಸಿಡಿಲು ಬಡಿದು ನವ ವಿವಾಹಿತ ಸಾವನ್ನಪ್ಪಿದ ಘಟನೆ ಕಡಬದ ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಮೃತ ದುರ್ದೈವಿ.
ಶುಕ್ರವಾರ ಸಂಜೆ ವೇಳೆಗೆ ಸುಬ್ರಹ್ಮಣ್ಯ ಭಾಗದಲ್ಲಿ ಮಳೆ ಆರಂಭಕ್ಕೂ ಮೊದಲು ಗಾಳಿ, ಗುಡುಗು ಆರಂಭಗೊಂಡಿತ್ತು. ಈ ಸಂದರ್ಭ ಮನೆಯ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಸೋಮಸುಂದರ್ ಅವರು ರಾಶಿ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ.
ಸೋಮಸುಂದರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತದರೂ ಅದಾಗಲೇ ಅವರು ಮೃತಪಟ್ಟಿದ್ದರು. ಇನ್ನು ಸೋಮಸುಂದರ್ ಅವರು ಸುಬ್ರಹ್ಮಣ್ಯ ಸಮೀಪ ಕಾರ್ ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. 15 ದಿನಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು .
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…