ಕಡಬ : ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆಯಿಂದ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ – Vishwanews24

Featured, ದಕ್ಷಿಣ ಕನ್ನಡ

ಕಡಬ : ಸೊಂಟಕ್ಕೆ ಬಲೂನು ಕಟ್ಟಿಕೊಂಡು ಸೇತುವೆಯಿಂದ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ

ಕಡಬ: ವ್ಯಕ್ತಿಯೋರ್ವರು ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆಯ ಮೇಲಿಂದ ಕುಮಾರಧಾರ ನದಿಗೆ ಹಾರಿದ ಬಗ್ಗೆ ವರದಿಯಾಗಿದೆ.

ಆಲಂಕಾರಿನಲ್ಲಿ ಉದ್ಯಮಿಯಾಗಿರುವ ಚಂದ್ರಶೇಖರ್ ಪೂಜಾರಿ (60) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮನೆಯಲ್ಲಿ ಇಂದು ಬೆಳಗ್ಗೆ ಚೀಟಿ ಬರೆದಿಟ್ಟು, ಶಾಂತಿಮೊಗರು ಸೇತುವೆಯ ಮೇಲೆ ತನ್ನ ಕಾರು ನಿಲ್ಲಿಸಿ ಬಲೂನ್ ಕಟ್ಟಿಕೊಂಡು ನೀರಿಗೆ ಹಾರಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬೆಳ್ಳಾರೆ ಮತ್ತು ಕಡಬ ಪೊಲೀಸರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ.

ಮಂಗಳೂರು:ಭಜರಂಗದಳ, ಆರ್‌ಎಸ್‌‌ಎಸ್‌ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ :  ನಳಿನ್ ಕಟೀಲ್  – Vishwanews24

ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ ಪೂಜಾರಿ ಅವರು ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮಾಜೀ ಅಧ್ಯಕ್ಷ ಹಾಗೂ ಪ್ರಸ್ತುತ ನಿರ್ದೇಶಕರಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಪತ್ನಿ, ಇಬ್ಬರು ಪುತ್ರರಿದ್ದು, ಇಬ್ಬರಿಗೂ ಮದುವೆಯಾಗಿದೆ. ಸಂತೃಪ್ತ ಕುಟುಂಬ, ವ್ಯಾಪಾರ ವಹಿವಾಟು ಕೂಡ ಚೆನ್ನಾಗಿತ್ತು. ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದು, ಹೀಗಿದ್ದರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪರಿಸರದಲ್ಲಿ ಆಶ್ಚರ್ಯವುಂಟು ಮಾಡಿದೆ. ಕಾರಿನಲ್ಲಿ ಅವರು ಬರೆದಿಟ್ಟ ಪತ್ರವೊಂದು ಸಿಕ್ಕಿದೆ. ಅದರಲ್ಲಿ ಕಾರು ಕೀ ಸೇತುವೆ ಮೇಲಿದೆ ಎಂದು ಬರೆದಿಟ್ಟಿದ್ದಾರೆ. ಕಡಬ ಪೊಲೀಸರು ಸ್ಥಳಕ್ಕಾಗಮಿಸಿ ಶವ ಮಹಜರು ಮಾಡಿದರು.

ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಚಂದ್ರಶೇಖರ ಪೂಜಾರಿ ಯಕ್ಷಗಾನ ಅರ್ಥಧಾರಿ ಮತ್ತು ಸಂಘಟಕರೂ ಆಗಿದ್ದರು. ಆಲಂಕಾರು ಮೂರ್ತೆದಾರರ ಸಹಕಾರಿ ಸಂಘ ಮೂರು ಅವಧಿಗೆ ಅಧ್ಯಕ್ಷರಾಗಿದ್ದರು. ಶರವೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದರು.

ಕಾಸರಗೋಡು: ನೇಣು ಬಿಗಿದು ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ – Vishwanews24

Leave a Reply