ಕಡಬ : ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್ (27) ಮೃತ ಯುವಕ. ಮಂಗಳವಾರ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನ. 12ರಂದು ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯವಾಗಿದ್ದು.
ತತ್‌ಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಮಂಗಳವಾರ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು. ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…