Featured

ಕಡಲ್ಕೊರೆತ ತಡೆಗೆ ಕರಾವಳಿ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ : ಲಕ್ಷ್ಮೀ  ಹೆಬ್ಬಾಳ್ಕರ್ – vishwanews24

ಕಡಲ್ಕೊರೆತ ತಡೆಗೆ ದ. ಕ., ಉಡುಪಿ ಮತ್ತು ಉ. ಕ. ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ : ಲಕ್ಷ್ಮೀ  ಹೆಬ್ಬಾಳ್ಕರ್

ಉಡುಪಿ: ಕಡಲ್ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ ಕಡಲ್ಕೊರೆತ ವಿಚಾರಕ್ಕೆ ಸಂಬಂಧಿಸಿ ಹಿಂದಿನ 10 ಕೋಟಿ ರೂ.ಬಿಲ್ ಬಾಕಿ ಇದೆ ಅದನ್ನೂ ಬಿಡುಗಡೆ ಮಾಡಲಾಗುತ್ತದೆ. ಕಡಲ್ಕೊರೆತ ಶಾಶ್ವತ ಪರಿಹಾರಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡುವುದು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರಕಾರ’ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕಾಗಿದೆ’ ಎಂದರು.

 

‘ಉಡುಪಿ ಜಿಲ್ಲೆಯಲ್ಲಿ ಬಸ್ ಕೊರತೆ ವಿಚಾರ ಗಮನಕ್ಕೆ ಬಂದಿದ್ದು, ಕೊರತೆ ನೀಗಿಸಲು ಸಾರಿಗೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. 3 ಸಾವಿರ ಸಾವಿರ ಬಸ್ ಗಳ ಖರೀದಿ ಆಗಿದ್ದು ಅವುಗಳ ಪೈಕಿ ಕೆಲವನ್ನು ಇಲ್ಲಿಗೆ ತರುವ ಪ್ರಯತ್ನ ಮಾಡುತ್ತೇವೆ’ ಎಂದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

37 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 hour ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

2 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago