ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ – Vishwanews24
ಕಡಲ್ಕೊರೆತ ಪ್ರದೇಶಕ್ಕೆ ಸ್ಪೀಕರ್ ಖಾದರ್ ದೌಡು : ಶಾಶ್ವತ ಕಾಮಗಾರಿ ಬಗ್ಗೆ ಸಮಾಲೋಚನೆ
ಉಳ್ಳಾಲ: ಕಡಲ್ಕೊರೆತಕ್ಕೆ ಒಳಗಾಗುತ್ತಿದ್ದ ಉಚ್ಚಿಲ, ಬಟ್ಟಂಪಾಡಿ, ಸೀ ಗ್ರೌಂಡ್ ಪ್ರದೇಶಗಳಿಗೆ ರಾಜ್ಯ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು. ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಅವರು ಜಿಲ್ಲಾಧಿಕಾರಿ ರವಿ ಕುಮಾರ್ ಎಮ್.ಆರ್. ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಈ ಹಿಂದೆ ಉಳ್ಳಾಲದ ಕೋಡಿ,ಕೋಟೆಪುರ, ಮೊಗವೀರಪಟ್ಣ, ಸುಭಾಷ್ ನಗರ, ಹಿಲೇರಿಯ ಮೊದಲಾದ ಭಾಗದಲ್ಲಿ ಶಾಶ್ವತವಾದ ಕೆಲಸ ಮಾಡಿದ ಕಾರಣ ಇವತ್ತು ಅಲ್ಲಿ ಕಡಲ್ಕೊರೆತ ರಕ್ಷಣಾ ಕಾರ್ಯ ನಡೆದಿದೆ.
ಆ ನಿಟ್ಟಿನಲ್ಲಿ ವಿಪರೀತ ಕಡಲ್ಕೊರೆತಕ್ಕೊಳಗಾಗುತ್ತಿರುವ ಸೋಮೇಶ್ವರ, ಉಚ್ಚಿಲ-ಬಟ್ಟಂಪಾಡಿ ಪ್ರದೇಶದಲ್ಲೂ ಶಾಶ್ವತ ರಕ್ಷಣಾ ಕಾರ್ಯ ಆಗಲೇಬೇಕಿದೆ. ಮೊದಲ ಹಂತದ ಕಾಮಗಾರಿ ನಡೆದಿದ್ದರೂ ರಸ್ತೆ ಕಡಲು ಪಾಲಾಗಿದೆ. ಸಮಸ್ಯೆ ಉಲ್ಭಣಗೊಂಡ ಬಳಿಕ ಕಾಮಗಾರಿ ನಡೆಸೋದಕ್ಕಿಂತ ಸಮಸ್ಯೆ ಉದ್ಭವಿಸುವ ಮುನ್ನವೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಜತೆಗೆ ಸಮಾಲೋಚಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದೇವೆ ಎಂದರು.
ಬಿಜೆಪಿ ಪ್ರವೀಣ್ ಪತ್ನಿಗೆ ದ್ರೋಹವೆಸಗಿದೆ : ಕಾಂಗ್ರೆಸ್ – Vishwanews24
ಕಡಲ್ಕೊರೆತಕ್ಕೆ ಸಂಬಂಧಪಟ್ಟಂತೆ ತುರ್ತು ಕಾಮಗಾರಿ ಮತ್ತು ಶಾಶ್ವತ ಕಾಮಗಾರಿ ಆಗಬೇಕಿದೆ. ಈಗಾಗಲೇ ಎನ್ ಐಟಿಕೆಯ ತಜ್ಞರು ಒಂದು ವರದಿ ಕೊಟ್ಟಿದ್ದಾರೆ. ಇಲ್ಲಿ ಶಾಶ್ವತ ಕಾಮಗಾರಿ ಆಗಬೇಕಾದ ಕಾರಣ ಅದಕ್ಕೆ ಸಂಬಂಧಪಟ್ಟ ತಜ್ಞ ಎಂಜಿನಿಯರ್ ಗಳನ್ನು ಕರೆಸಿ ಅವರು ಕೊಟ್ಟ ವರದಿಯನ್ನು ಸಂಬಂಧಪಟ್ಟ ಇಲಾಖೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿ ಮುಂದಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಎಂದರು.
