Featured

ಉಡುಪಿ: ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ – vishwanews24

ಕಡಿಯಾಳಿಯ ಅಂಗನವಾಡಿ ಕೇಂದ್ರಕ್ಕೆ  ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

 ಉಡುಪಿ: ಉಡುಪಿ ನಗರದ ಕಡಿಯಾಳಿ ಅಂಗನವಾಡಿ ಕೇಂದ್ರಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

  ಅಂಗನವಾಡಿಯ ಸುತ್ತಮುತ್ತಲಿನ ಪರಿಸರ, ಮಕ್ಕಳ ತರಗತಿ ಗೃಹ, ಅಡುಗೆ ಕೋಣೆ, ದಾಸ್ತಾನು ಕೊಠಡಿ ಸೇರಿದಂತೆ ಮತ್ತಿತರ ದಾಖಲೆಗಳನ್ನು ಪರಿಶೀಲನೆ ನಡೆಸಿದರು. 

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರಿಗೆ ಕಟ್ಟಡದ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಬೇಕು. ಇತ್ತೀಚಿನ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ತಾಣವಾಗುವ ಸಾಧ್ಯತೆ ಇರುತ್ತದೆ. ಸೊಳ್ಳೆಗಳ ಕಚ್ಚುವಿಕೆಯಿಂದ ಮಕ್ಕಳಿಗೆ ರೋಗ-ರುಜಿನಗಳು ಬರುವ ಸಾಧ್ಯತೆ ಇರುತ್ತದೆ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು.

ಪ್ರಸಕ್ತ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆಹಾರ, ಉತ್ಪನ್ನಗಳ ಬಗ್ಗೆ ಮಾಹಿತಿ ಪಡೆದ ಅವರು, ಉತ್ತಮ ಗುಣಮಟ್ಟದ ಆಹಾರ ವಿತರಣೆಗೆ ಸೂಚನೆ ನೀಡಿದರು. 

ಮಕ್ಕಳಿಗೆ ನೀಡುತ್ತಿರುವ ಆಟಿಕೆ ವಸ್ತುಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಮಕ್ಕಳಿಂದ ರೈಮ್ಸ್ ಹೇಳಿದ್ದನ್ನು ಕೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಎಸ್‌ಪಿ ಡಾ. ಅರುಣ್ ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

9 hours ago