Featured

ಕಡೆಗೂ ಬೋನಿಗೆ ಬಿದ್ದ ಚಿರತೆ – ಯಶಸ್ವಿಯಾದ ಅರಣ್ಯ ಇಲಾಖೆ- ನಿಟ್ಟುಸಿರು ಬಿಟ್ಟ ಗ್ರಾಮಸ್ಥರು.vishwanews24

ಗಂಗಾವತಿ: ಕಳೆದ 6-7 ತಿಂಗಳಿಂದ ತಾಲೂಕಿನ ಆನೆಗೊಂದಿ ಹನುಮನಹಳ್ಳಿ, ಜಂಗ್ಲಿ ರಂಗಾಪೂರ ಸುತ್ತಲಿನ‌ ಜನಜಾನುವಾರುಗಳಿಗೆ ತೀವ್ರ ಉಪಟಳ ನೀಡಿದ್ದ ಮತ್ತು ಒರ್ವ ಯುವಕನನ್ನು ಕೊಂದು ಹಲವರಿಗೆ ಕಚ್ಚಿ ಗಾಯಗೊಳಿಸಿದ್ದ ಚಿರತೆಯನ್ನು ಬೋನಿನ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಆನೆಗೊಂದಿ ಆದಿಶಕ್ತಿ ದೇಗುಲದ ಹಿಂಭಾಗದಲ್ಲಿ ಯುವಕನನ್ನು ಕೊಂದು ಹಾಕಿದ್ದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸತತ ಯತ್ನ ನಡೆಸಿತ್ತು. 16 ಕಡೆ ಬೋನುಗಳನ್ನು ಇರಿಸಲಾಗಿತ್ತು. ಡ್ರೋಣ್ ಕ್ಯಾಮರಾ ಮತ್ತು‌ ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಚಿರತೆಗಳ ಚಲನವಲನಗಳನ್ನು ಗಮನಿಸಲಾಗಿತ್ತು.
ಎರಡು ದಿನಗಳ ಹಿಂದೆ ಸಂಗಾಪೂರ ಶ್ರೀರಂಗದೇವರಾಯಲು ನಗರದಲ್ಲಿ 9 ವರ್ಷದ ಬಾಲಕ ಮೇಲೆ ದಾಳಿ ಮಾಡಿದ್ದ ಚಿರತೆ ತೀವ್ರ ಗಾಯಗೊಳಿಸಿತ್ತು. ಈ ಮಧ್ಯೆ ಚಿರತೆ ಸೆರೆಹಿಡಿದು ಜನರಿಗೆ ರಕ್ಷಣೆ ನೀಡುವಂತೆ ವ್ಯಾಪಕ ಆಗ್ರಹ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಸಕ ಪರಣ್ಣ ಮುನವಳ್ಳಿ, ಅರಣ್ಯ ಸಚಿವ ಆನಂದ ಸಿಂಗ್ ರನ್ನು ಸಂಪರ್ಕ ಮಾಡಿ ತಜ್ಞರನ್ನು ಕಳಿಸಿ ಚಿರತೆ ಕರಡಿಗಳನ್ನು ಸೆರೆ ಹಿಡಿಯಲು ಮನವಿ ಮಾಡಿದ್ದರು.

ಗುರುವಾರ ಬಳ್ಳಾರಿ ದರೋಜಿ ಕರಡಿಧಾಮ‌ ಹಾಗೂ ಎಸ್ ವೈ ಎಸ್ ಸ್ವಯಂ ಸೇವಾ ಸಂಸ್ಥೆಯ ತಜ್ಞರು ಆಗಮಿಸಿ ಇನ್ನಷ್ಟು ಸಿಸಿ ಕ್ಯಾಮರಾಗಳು ಮತ್ತು ಚಿರತೆ ಕರಡಿಗಳ ಹೆಜ್ಜೆ ಗುರುತಿಸುವ ಉಪಕರಣಗಳನ್ನು ಇರಿಸಿದ್ದರು. ಇದೀಗ ಚಿರತೆಯು ಬೋನಿಗೆ ಬಿದ್ದಿದ್ದು, ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಾಣಿಸಂಗ್ರಹಾಲಯಕ್ಕೆ ಚಿರತೆ ರವಾನೆ ಸಾಧ್ಯತೆ: ಆನೆಗೊಂದಿ ಹತ್ತಿರ ಸೆರೆ ಸಿಕ್ಕಿರುವ ಸುಮಾರು 05 ವರ್ಷದ ಚಿರತೆಗೆ ವೈದ್ಯಕೀಯ ಪರೀಕ್ಷೆಗಾಗಿ ಅರವಳಿಕೆ ಚುಚ್ಚುಮದ್ದು ನೀಡಿ ಬೆಟ್ಟದಿಂದ ಕೆಳಗೆ ತಂದು‌ ವೈದ್ಯಕೀಯ ಪರೀಕ್ಷೆ ನಂತರ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರಾಣಿಸಂಗ್ರಹಾಲಯಕ್ಕೆ ಕಳಿಸುವ ಸಾಧ್ಯತೆ ಇದೆ ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಜ್ ಮೇಟಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago