ಉಡುಪಿ: ಕಾರ್ಯಕರ್ತರ ಧ್ವನಿಯಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ. ಗೆದ್ದ ಮೇಲೆ ನಾನಾಗಿಯೇ ಬಿಜೆಪಿ ಕಚೇರಿಗೆ ಹೋಗುವೆ. ಸೋತರೂ ಬಿಜೆಪಿ ಕಾರ್ಯ ಕರ್ತನಾಗಿಯೇ ಇರುವೆ. ಸಂಘದ ಹಿರಿಯರೂ ಆಯ್ತು ನೋಡೋಣ ಕೆಲಸ ಮಾಡಿ ಎನ್ನುವ ಅನಿವಾರ್ಯ ಸ್ಥಿತಿಯಲ್ಲಿ ಇದ್ದಾರೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್ ಹೇಳಿದರು.
ತಮ್ಮ ಮನೆಯಲ್ಲಿ ಬುಧವಾರ ನಡೆದ ಹಿತೈಷಿಗಳ ಸಭೆಯಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಇಂತಹ ದಿನ ಬರಲಿದೆ ಎಂದೂ ಯೋಚಿಸಿರಲಿಲ್ಲ. ಇದು ದುಡುಕಿನ ನಿರ್ಧಾರವಲ್ಲ; ಯೋಚಿಸಿಯೇ ತೆಗೆದುಕೊಂಡಿದ್ದು. ಕಣದಿಂದ ಹಿಂದೆ ಸರಿಯಲಾರೆ ಎಂದರು.
2023ರ ವಿಧಾನಸಭೆ ಚುನಾವಣೆ ಯಲ್ಲಿ ಪಕ್ಷದಿಂದ ಟಿಕೆಟ್ ಕೈತಪ್ಪಿದಾಗ ಕಾಂಗ್ರೆಸ್ ಅಥವಾ ಪಕ್ಷೇತರರಾಗಿ ಸ್ಪರ್ಧಿಸಲು ಒತ್ತಡ ಇತ್ತು. ಆದರೂ ಪಕ್ಷದ ಅಭ್ಯರ್ಥಿಯ ಪರ ಕೆಲಸ ಮಾಡಿದೆ. ಲೋಕಸಭೆ ಚುನಾವಣೆಯಲ್ಲೂ ಪೂರ್ಣ ತೊಡಗಿಕೊಂಡೆ. ಆದರೆ ಬಿಜೆಪಿ ನಾಯಕರು ನಾನು ಮೂರು ಬಾರಿ ಗೆದ್ದಿರುವ ಮಾಜಿ ಶಾಸಕ ಎಂಬುದನ್ನು ಮರೆತು ಕಚೇರಿಯಲ್ಲಿದ್ದ ನನ್ನ ಭಾವಚಿತ್ರವನ್ನು ತೆಗೆದು ಹಾಕಿದರು. ಕನಿಷ್ಠ ಮನ್ನಣೆ, ಪ್ರೀತಿ, ಗೌರವವನ್ನು ತೋರಿಸಿಲ್ಲ ಎಂದು ದೂರಿದರು.
ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ದಶಕಗಳ ಪದ್ಧತಿ ಮುರಿದಿದ್ದಾರೆ. ನಾನು ಯಾರನ್ನೂ ಸೋಲಿಸಲು ನಿಲ್ಲುತ್ತಿಲ್ಲ. ಜನರ ಸೇವೆ ಮಾಡಲು ಸ್ಪರ್ಧಿಸುತ್ತಿರುವೆ. ಮೋದಿಯವರ ಆದರ್ಶ, ಡಾ| ವಿ.ಎಸ್. ಆಚಾರ್ಯರ ಮಾರ್ಗ ದರ್ಶನ ಹಾಗೂ ಕರಂಬಳ್ಳಿ ಸಂಜೀವ ಶೆಟ್ಟಿಯವರು ನೀಡಿದ್ದ ಪಾಠ ಸದಾ ನನ್ನೊಂದಿಗೆ ಇರುತ್ತದೆ ಮತ್ತು ನಾನು ಎಂದಿಗೂ ಬಿಜೆಪಿಗನೇ ಆಗಿರುವೆ ಎಂದರು. ವಾಸುದೇವ್ ಭಟ್ ಪೆರಂಪಳ್ಳಿ ನಿರೂಪಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…