ನವದೆಹಲಿ, : ಕಣಿವೆಯಲ್ಲಿ ಶಾಂತಿ ಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರ ಮೀಸಲು ವಿಧೇಯಕ -2019 ಮಂಡಿಸಿದ ಬಳಿಕ ಮಾತನಾಡಿದರು. ಈ ವೇಳೆ ಜಮ್ಮು ಕಾಶ್ಮೀರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಶಾ ವಿವರಿಸಿದರು.
ನಿರಂತರ ಉಗ್ರರ ದಾಳಿ ಹಾಗೂ ಬಾಂಬ್ ಸ್ಪೋಟಕ್ಕೆ ತತ್ತರಿಸಿ ಹೋಗುತ್ತಿರುವ ಜನ ಮತ್ತು ವಿದ್ಯಾರ್ಥಿಗಳಿಗೆ ಆಶ್ರಯ ನೀಡುವ ಕೆಲಸವಾಗಬೇಕಿದೆ. ಮಸೂದೆಯಿಂದ ಕಥುವಾ, ಸಾಂಬಾ ಮತ್ತು ಜಮ್ಮುವಿನಲ್ಲಿ ವಾಸಿಸುವ 3.5 ಲಕ್ಷ ಜನರಿಗೆ ಸಹಾಯವಾಗಲಿದೆ ಎಂದು ಹೇಳಿದರು.
ಸದ್ಯ ಕಾನೂನಿನ ಪ್ರಕಾರ ರಾಜ್ಯದಲ್ಲಿ ಶೇಕಡಾ 43 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಈ ಪೈಕಿ ಶೇ. 3ರಷ್ಟು ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಿಸುವ ಜನರಿಗೆ ಲಭ್ಯವಾಗುತ್ತಿದೆ. ನಾವು ಜಾರಿಗೆ ಮಾಡಲಿರುವ ನೂತನ ಮಸೂದೆ ರಾಜ್ಯದ ಅಂತರಾಷ್ಟ್ರೀಯ ಗಡಿಯಲ್ಲಿ ವಾಸಿಸುವ ಜನರಿಗೆ ಶೇಕಡಾ 3 ರಷ್ಟು ಮೀಸಲಾತಿ ವಿಸ್ತರಿಸಲು ಅವಕಾಶ ನೀಡುತ್ತದೆ ಎಂದು ಹೇಳಿದರು.
ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಣಿವೆ ರಾಜ್ಯದಲ್ಲಿ ಉಗ್ರವಾದಕ್ಕೆ ಬಂಡವಾಳ ಪೂರೈಕೆಯಾಗುತ್ತಿದುದು ಸಂಪೂರ್ಣ ಬಂದ್ ಆಗಿದೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…