Featured

ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಲಿಫ್ಟ್‌ಗೆ ಸಿಲುಕಿ ಬಾಲಕಿ ಸಾವು – Vishwanews24

ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಲಿಫ್ಟ್‌ಗೆ ಸಿಲುಕಿ ಬಾಲಕಿ ಸಾವು

ಮುಂಬೈ: ಮುಂಬೈನ ಮನ್‌ಖುರ್ದ್ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಶುಕ್ರವಾರ 16 ವರ್ಷದ ಬಾಲಕಿ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಸಾವನ್ನಪ್ಪಿದ್ದಾಳೆ.

ಮೃತಳನ್ನು ರೇಷ್ಮಾ ಖಾರವಿ ಎಂದು ಗುರುತಿಸಲಾಗಿದೆ. ರೇಷ್ಮಾ ಆಕೆಯ ಸ್ನೇಹಿತರ ಜೊತೆ ಕಣ್ಣಾಮುಚ್ಚಾಲೆ ಆಡುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಸ್ನೇಹಿತರು ಲಿಫ್ಟ್‌ ಒಳಗೆ ಅಡಗಿ ಕುಳಿತಿರಬಹುದೆಂದು ಲಿಫ್ಟ್‌ನಲ್ಲಿದ್ದ ಚಿಕ್ಕ ಕಿಟಕಿಯ ಒಳಗೆ ತನ್ನ ತಲೆ ತೂರಿಸಿ ನೋಡುವಾಗ ಮೇಲಿಂದ ಲಿಫ್ಟ್‌ ಬಂದಿದೆ. ಈ ವೇಳೆ ಲಿಫ್ಟ್‌ ರೇಷ್ಮಾಳ ತಲೆಗೆ ಬಡಿದಿದ್ದು, ಆಕೆ ಅಲ್ಲೇ ಸಾವನ್ನಪ್ಪಿದ್ದಾಳೆ.

ಮಂಗಳೂರು: ದ.ಕ. ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ – Vishwanews24

ಈ ಘಟನೆಯಿಂದ ನೊಂದಿರುವ ರೇಷ್ಮಾಳ ಕುಟುಂಬಸ್ಥರು ಹೌಸಿಂಗ್ ಸೊಸೈಟಿಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಪಘಾತ ತಪ್ಪಿಸಲು ಹೌಸಿಂಗ್ ಸೊಸೈಟಿ ಅಧಿಕಾರಿಗಳು ಕಿಟಕಿಗೆ ಗಾಜು ಅಳವಡಿಸಬೇಕು ಎಂದು ಮೃತರ ತಂದೆ ರವಿ ಖಾರವಿ ಹೇಳಿದ್ದಾರೆ.

ಈ ಸಂಬಂಧ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಹೌಸಿಂಗ್ ಸೊಸೈಟಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಖುರ್ದ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ನಿರೀಕ್ಷಕ ಮಹಾದೇವ ಕೋಳಿ ತಿಳಿಸಿದ್ದಾರೆ.

ಗ್ರಾಮಸ್ಥರ ವಿಜೃಂಭಣೆ ಆತ್ಮೀಯತೆ ಅದ್ಧೂರಿ ಸ್ವಾಗತಕ್ಕೆ ಭಾವುಕರಾದ ಗುಡ್ಡ ಪಾಣರ..

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago