Featured

ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ – vishwanews24

ಕಣ್ಣುಗಳಿಗೆ ಕುತ್ತು ತಂದ ಲೆನ್ಸ್ ; ಕಾರ್ನಿಯಾ ಗಾಯದಿಂದ ಶಸ್ತ್ರಚಿಕಿತ್ಸೆಗೆ ಒಳಗಾದ ನಟಿ

ಮುಂಬೈ : ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ನಟಿಸಿರುವ ಜಾಸ್ಮಿನ್ ಭಾಸಿನ್ ಇದೀಗ ತೀವ್ರ ಕಣ್ಣಿನ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ತಮ್ಮ ನೋವು ತೋಡಿಕೊಂಡಿದ್ದಾರೆ. ದೃಷ್ಠಿ ಕಳೆದುಕೊಳ್ಳುವ ಹಂತಕ್ಕೆ ತಲುಪಿದ್ದು, ಚಿಕಿತ್ಸೆ ಮುಂದುವರಿದಿದೆ. ಲೆನ್ಸ್ ಧರಿಸುತ್ತಿದ್ದ ಜಾಸ್ಮಿನ್ ಭಾಸಿನ್ ಸರಿಯಾಗಿ ಧರಿಸದ ಕಾರಣ ನಟಿಯ ಕಾರ್ನಿಯಾ ಗಾಯಗೊಂಡು ಕಣ್ಣು ಊದಿಕೊಂಡಿತ್ತು. ಹೀಗಾಗಿ ದಿಢೀರ್ ಆಸ್ಪತ್ರೆ ದಾಖಲಾಗಿದೆ.

ಜುಲೈ 17 ರಂದು ನಟಿಗೆ ತೀವ್ರ ಕಣ್ಣಿನ ನೋವು ಕಾಣಿಸಿಕೊಂಡಿದೆ. ದೆಹಲಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜಾಸ್ಮಿನ್‌ಗೆ ಕಣ್ಣಿನ ನೋವು ತೀವ್ರಗೊಂಡಿದೆ. ಆದರೆ ಸತತ ಕಾರ್ಯಕ್ರಮಗಳ ಕಾರಣ ವೈದ್ಯರನ್ನು ಬೇಟಿಯಾಗಿಲ್ಲ. ಹೀಗಾಗಿ ನೋವು ಉಲ್ಬಣಿಸಿದೆ. ಹೀಗಾಗಿ ಮುಂಬೈಗೆ ಮರಳಿದ ನಟಿ ದಿಢೀರ್ ವೈದ್ಯರ ಭೇಟಿಯಾಗಿದ್ದಾರೆ.

ತಪಾಸಣೆ ವೈದ್ಯರು ಆಸ್ಪತ್ರೆ ದಾಖಲಾಗಲು ಸೂಚಿಸಿದ್ದಾರೆ. ಸರಿಯಾಗಿ ಲೆನ್ಸ್ ಧರಿಸಿದ ಕಾರಣ ನಟಿ ಕಾರ್ನಿಯಾಗೆ ಹಾನಿಯಾಗಿದೆ. ಇದರಿಂದ ಕಣ್ಣುಗಳು ಊದಿಕೊಂಡು ನೋವು ಕಾಣಿಸಿಕೊಂಡಿದೆ. ತಕ್ಷಣವೇ ನಟಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಎರಡೂ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಲಾಗಿದೆ.ಚೇತರಿಕೆಗೆ ಕನಿಷ್ಠ 5 ರಿಂದ 6 ದಿನಗಳ ಅವಶ್ಯಕತೆ ಇದೆ. ಸದ್ಯ ಕಣ್ಣುಗಳಿಗೆ ಬ್ಯಾಂಡೇಜ್ ಹಾಕಿರುವ ಕಾರಣ ಕಣ್ಣು ಕಾಣುತ್ತಿಲ್ಲ ಎಂದು ನಟಿ ಹೇಳಿಕೊಂಡಿದ್ದಾರೆ.

ಜಾಸ್ಮಿನ್ ಕನ್ನಡದಲ್ಲಿ ಕೋಮಲ್‌ಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ತಮಿಳು, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ಜಾಸ್ಮಿನ್ ಭಾಸಿನ್ ಕಾಣಿಸಿಕೊಂಡಿದ್ದಾರೆ. 2011ರಲ್ಲಿ ತಮಿಳು ಚಿತ್ರ ವಾನಂ ಮೂಲಕ ಸಿನಿ ಕರಿಯರ್ ಆರಂಭಿಸಿದ ಜಾಸ್ಮಿನ್ ಟ್ವಿಂಕಲ್ ತನೇಜಾ, ತೆನೆ ಬನುಶಲಿ ದಿಲ್ ಸೆ ದಿಲ್ ತಕ್ ಸೇರಿದಂತೆ ಹಲವು ಜನಪ್ರಿಯ ಸಿನಿಮಾ ಹಾಗೂ ಸೀರಿಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಖತ್ರೋ ಕಿ ಕಿಲಾಡಿ, ಹಿಂದಿ ಬಿಗ್ ಬಾಸ್ 14ರಲ್ಲೂ ಜಾಸ್ಮಿನ್ ಕಾಣಿಸಿಕೊಂಡು ಖ್ಯಾತಿ ಗಳಿಸಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago