ಕಣ್ಣೂರು: ಚಲಿಸುತ್ತಿರುವ ರೈಲನ್ನು ಹತ್ತಬೇಡಿ ಎಂದು ರೈಲ್ವೆ ಇಲಾಖೆ ಎಷ್ಟೇ ಮನವಿ ಮಾಡಿದರೂ ಜನ ಮಾತ್ರ ಮತ್ತೆ ಮತ್ತೆ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಂತಹುದೇ ಘಟನೆ ಕೇರಳ ಕಣ್ಣೂರಿನಲ್ಲಿ ನಡೆದಿದೆ. ಯುವತಿಯೊಬ್ಬಳು ಚಲಿಸುತ್ತಿದ ರೈಲು ಹತ್ತಲು ಹೋಗಿ ಪ್ಲಾಟ್‌ಫಾರ್ಮ್ ನಿಂದ ರೈಲು ಹಳಿಗೆ ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಘಟನೆಯ ದೃಶ್ಯ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಮೈ ಜುಮ್ ಎನ್ನುವಂತಿದೆ. ಭಾನುವಾರ ಬೆಳಿಗ್ಗೆ ಸುಮಾರು 7.30 ರ ಸಮಯದಲ್ಲಿ ಯುವತಿಯೊಬ್ಬಳು ರೈಲಿನಲ್ಲಿ ಪ್ರಯಾಣಿಸಲು ರೈಲು ನಿಲ್ದಾಣಕ್ಕೆ ಬಂದಿದ್ದಾಳೆ ಆದರೆ ರೈಲು ಹೊರಡಲು ಕೆಲವೇ ಸಮಯ ಇರುವ ಹೊತ್ತಿಗೆ ಯುವತಿ ಪಕ್ಕದಲ್ಲೇ ಇದ್ದ ಅಂಗಡಿಯಲ್ಲಿ ತಿಂಡಿ ಖರೀದಿಸಲು ಬಂದಿದ್ದಾಳೆ ಅಷ್ಟೋತ್ತಿಗಾಗಲೇ ರೈಲು ಹೊರಟಿದೆ ಇತ್ತ ತಿಂಡಿ ಕೈಯಲ್ಲಿ ಹಿಡಿದು ದುಡ್ಡು ಕೊಡಬೇಕು ಎನ್ನುವಷ್ಟರಲ್ಲಿ ಯುವತಿ ರೈಲು ಚಲಿಸುತ್ತಿರುವುದನ್ನು ಕಂಡಿದ್ದಾಳೆ ಕೂಡಲೇ ಯುವತಿ ತಿಂಡಿ ಪ್ಯಾಕೆಟ್ ಅಂಗಡಿಯಾತನಿಗೆ ನೀಡಿ ರೈಲು ಹತ್ತಲು ಬಂದಿದ್ದಾಳೆ ಈ ವೇಳೆ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವತಿ ಆಯತಪ್ಪಿ ಪ್ಲಾಟ್‌ಫಾರ್ಮ್ ನಿಂದ ಕೆಳಗೆ ಬಿದ್ದಿದ್ದಾಳೆ ಕೂಡಲೇ ಅಲ್ಲಿದ್ದ ಜನ ಯುವತಿಯ ರಕ್ಷಣೆಗೆ ಮುಂದಾದರೂ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಕೂಡಲೇ ರೈಲು ನಿಲ್ಲಿಸಿದ ಪರಿಣಾಮ ಯುವತಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾಳೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…