ಉಡುಪಿ. : ಉಡುಪಿಯ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ 7 ಜನ ಮೀನುಗಾರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಅವರು, ಉಡುಪಿಯಿಂದ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ಕಣ್ಮರೆಯಾಗಿದ್ದಾರೆ. ಮೀನುಗಾರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಧನ ನೀಡುವ ಆದೇಶವಾಗಿದೆ. ಮೀನುಗಾರ ಸಂಕಷ್ಟ ಪರಿಹಾರ ನಿಧಿ, ಸಿಎಂ ಪರಿಹಾರ ನಿಧಿಯಿಂದ ಹಣ ನೀಡಲಾಗುವುದು. ಸಮುದ್ರದಲ್ಲಿ ಕಣ್ಮರೆಯಾದವರು ಶೀಘ್ರ ಪತ್ತೆಯಾಗಲಿ ಎಂಬುದು ನಮ್ಮ ಆಶಯ ಎಂದು ಹೇಳಿದರು.
ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ದೊಡ್ಡ ಮೊತ್ತದ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಭರವಸೆ ನೀಡಿದರು.
ನಾಲ್ಕೂವರೆ ತಿಂಗಳ ಹಿಂದೆ ಉಡುಪಿಯ ಮಲ್ಪೆ ಬಂದರ್ ನಿಂದ ಮೀನುಗಾರಿಕೆ ತೆರಳಿದ್ದ ಸುವರ್ಣ ತ್ರಿಭುಜ ಎಂಬ ಬೋಟಿನ ಅವಶೇಷಗಳು ಮಹಾರಾಷ್ಟ್ರದ ಮಾಲ್ವಾನ್ ಬಳಿ ಸಮುದ್ರದಲ್ಲಿ ಇತ್ತೀಚಿಗೆ ಪತ್ತೆಯಾಗಿದ್ದವು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…