Featured

ಕತಾರ್‌ನಲ್ಲಿ ಭಾರತೀಯ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಸಮುದ್ರ ಪಾಲು – Vishwanews24

ಕತಾರ್‌ನಲ್ಲಿ ಭಾರತೀಯ ಮೂಲದ ಇಬ್ಬರು ಮಕ್ಕಳು ಸೇರಿ ಮೂವರು ಸಮುದ್ರ ಪಾಲು – Vishwanews24

ದೋಹಾ : ಕತಾರ್‌ ನ ಮರೂನಾ ಬೀಚ್ ನಲ್ಲಿ ವಾರಾಂತ್ಯದ ವಿಹಾರಕ್ಕಾಗಿ ತೆರಳಿದ ಭಾರತೀಯ ಮೂಲದ ಮೂವರು ಸಮುದ್ರಪಾಲಾದ ದುರ್ಘಟನೆ ಶುಕ್ರವಾರ ನಡೆದಿದೆ.

ನೀರುಪಾಲಾದವರು ತಮಿಳುನಾಡು ಮೂಲದ ಬಾಲಾಜಿ ಬಲಗೂರು (38),ಪುತ್ರ ರಕ್ಷಣ್ (10),ನೆರೆಮನೆಯ ವರ್ಷಿಣಿ ವೈದ್ಯನಾಥನ್ (12) ಎಂದು ತಿಳಿದುಬಂದಿದೆ.

ಎರಡು ಕುಟುಂಬಗಳು ಒಟ್ಟಾಗಿ ಬೀಚ್ ಗೆ ವಿಹಾರಕ್ಕೆಂದು ತೆರಳಿದ ವೇಳೆ ಭಾರಿ ಅಲೆ ಅಪ್ಪಳಿಸಿ ಮೂವರು ನೀರುಪಾಲಾಗಿದ್ದಾರೆ ಎಂದು ಬಾಲಾಜಿ ಅವರ ಸಂಬಂಧಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬಾಲಾಜಿ ಅವರು ಕುಂಭಕೋಣಂ ಜಿಲ್ಲೆಯವರಾಗಿದ್ದು, ಕೆಇಒ ಇಂಟರ್ನ್ಯಾಷನಲ್ ಕನ್ಸಲ್ಟೆಂಟ್ಸ್ ನಲ್ಲಿ ಹಿರಿಯ ಎಲೆಕ್ಟ್ರಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ವರ್ಷಿಣಿ ಅವರ ಕುಟುಂಬ ಚೆನ್ನೈ ಮೂಲದ್ದು ಎಂದು ತಿಳಿದು ಬಂದಿದೆ.

ಮೂವರ ಮೃತ ದೇಹಗಳನ್ನು ತರುವ ವ್ಯವಸ್ಥೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಸೇರಿ 8 ಜನರು ಕ್ರೈಸ್ತ ಧರ್ಮದಿಂದ ಸ್ವಧರ್ಮಕ್ಕೆ ವಾಪಸ್.. Vishwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

3 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

3 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago