Featured

ಕನಸ್ಸಿನಲ್ಲಿ ಬರುತ್ತಿದ್ದ ಶ್ರೀರಾಮಚಂದ್ರ ; ಹಿಂದೂ ಧರ್ಮಕ್ಕೆ ಮತಾಂತರವಾದ ಮುಸ್ಲಿಮ್ ಕುಟುಂಬ

ಲಕ್ನೋ: ಕನಸ್ಸಿನಲ್ಲಿ  ಶ್ರೀರಾಮಚಂದ್ರ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

ಶಾಮ್ಲಿ ಜಿಲ್ಲೆಯ ಸದರ್ ಕೋತ್ವಾಲಿಯ ಹರೇಂದ್ರ ನಗರದ ನಿವಾಸಿ ಶಹಜಾದ್ ಕುಂಟುಬ ಬುಧವಾರ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮವನ್ನು ಸ್ವೀಕರಿಸಿದೆ. ಇದಾದ ನಂತರ ಶ್ರೀರಾಮನ ದೇವಾಲಯಕ್ಕೆ ಪೂಜೆ ಸಲ್ಲಿಸಿ, ಹಿಂದೂ ಧರ್ಮಕ್ಕೆ ಬದಲಾದ ಬಳಿಕ ಶಹಜಾದ್ ತಮ್ಮ ಹೆಸರನ್ನು ಸಂಜು ಎಂದು ಮರು ನಾಮಕರಣವನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಜೈ ಶ್ರೀರಾಮ್ ಎನ್ನುವ ಘೋಷಣೆಯನ್ನು ಕೂಗಿದ್ದಾರೆ.

ಈ ಕುರಿತು ಮಾತನಾಡಿದ ಶಹಝಾದ್, ನನಗೆ ಹಲವು ದಿನಗಳಿಂದ ಕನಸಿನಲ್ಲಿ ಶ್ರೀರಾಮ ಬಂದು ಹಿಂದೂ ಧರ್ಮಕ್ಕೆ ಮತಾಂತರವಾಗಲು ಹೇಳುತ್ತಿದ್ದ. ನಮ್ಮ ಪೂರ್ವಜರನ್ನು ಬಲವಂತವಾಗಿ ಇಸ್ಲಾಮ್ ಧರ್ಮಕ್ಕೆ ಮತಾಂತರ ಮಾಡಲಾಗಿತ್ತು. ನಾನೀಗ ಮರಳಿ ಹಿಂದೂ ಧರ್ಮಕ್ಕೆ ಬಂದಿದ್ದೇನೆ. ನನಗೆ ಯಾವುದೇ ವ್ಯಕ್ತಿಗಳಾಗಲೀ ಸಂಘಟನೆಗಳಾಗಲೀ ಮತಾಂತರವಾಗುವಂತೆ ಬಲವಂತ ಮಾಡಿಲ್ಲ. ನಮ್ಮ ಸ್ವ ಇಚ್ಛೆಯಿಂದಲೇ ಮತಾಂತರವಾಗುತ್ತಿದ್ದೇವೆ ಎಂದು ಹೇಳಿದ್ದಾರೆ.

ನನ್ನ ಆರಾಧ್ಯ ದೈವ ಭಗವಾನ್ ಶ್ರೀರಾಮಚಂದ್ರ. ನಾನು ನನ್ನ ಮುಂದಿನ ದಿನಗಳನ್ನು ಹಿಂದೂ ಸಂಪ್ರದಾಯದಂತೆ ಅನುಸರಿಸುತ್ತೇನೆ ಎಂದು ಹೇಳಿದರು.ಈ ಬಗ್ಗೆ ಶಾಮ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಂಜು ಅಲಿಯಾಸ್ ಶಹಜಾದ್, ನಾನು ನನ್ನ ಸ್ವ-ಇಚ್ಛೆಯಿಂದ ಹಿಂದೂ ಧರ್ಮವನ್ನು ಸ್ವೀಕರಿಸಿದ್ದೇನೆ. ನನಗೆ ಹಿಂದೂ ಧರ್ಮಕ್ಕೆ ಮರಳಲು ಹಾಗೂ ಹಿಂದೂಗಳಂತೆ ಪೂಜೆ-ಪುನಸ್ಕಾರ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿಕೊಂಡಿದ್ದಾರೆ.

ಜಾಹೀರಾತುಗಳು

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago