ಕನ್ನಡದ ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ – Vishwanews24

Featured, ರಾಜ್ಯ ನ್ಯೂಸ್

ಫಲಿಸದ ಪ್ರಾರ್ಥನೆ – ಕನ್ನಡದ ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ನಿಧನ

ಕನ್ನಡದ ಅಮೃತವರ್ಷಿಣಿ  ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬುಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್​ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್​ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ.

ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ವಾಹನ : ಆರು ಮಂದಿಗೆ ಗಾಯ – Vishwanews24

Leave a Reply