ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬುಇಂದು (ಮೇ 22) ರಂದು ಹೈದರಾಬಾದ್ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.
ಶರತ್ ಬಾಬು ಅವರನ್ನು ಏಪ್ರಿಲ್ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಏಪ್ರಿಲ್ 20 ರ ಸುಮಾರಿಗೆ ಹೈದರಾಬಾದ್ನ ಗಚ್ಚಿಬೌಲಿಯ ಎಐಜಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ಐಸಿಯು ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…