Featured

ಕನ್ನಡದ ಖ್ಯಾತ ಲೇಖಕಿ, ಕಾದಂಬರಿಗಾರ್ತಿ ಆಶಾ ರಘು ನಿಧನ – vishwanews24

ಕನ್ನಡದ ಖ್ಯಾತ ಲೇಖಕಿ, ಕಾದಂಬರಿಗಾರ್ತಿ ಆಶಾ ರಘು ನಿಧನ

ಬೆಂಗಳೂರು: ಪ್ರಕಾಶಕಿ, ಸಾಹಿತಿ ಆಶಾ ರಘು (47) ಅವರು ಮಲ್ಲೇಶ್ವರದ 9ನೇ ಕ್ರಾಸ್‌ನ ತಮ್ಮ ಮನೆಯಲ್ಲಿ ಶನಿವಾರ ನಿಧನರಾದರು. ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಆಶಾ ಅವರಿಗೆ ಪುತ್ರಿ ಇದ್ದಾರೆ. ಎರಡು ವರ್ಷಗಳ ಹಿಂದೆ ಆಹಾರ ತಜ್ಞ, ಪತಿ‌‌ ಕೆ.ಸಿ.ರಘು ಅವರು ಮೃತಪಟ್ಟಿದ್ದರು.‌

ಮರಣೋತ್ತರ ಪರೀಕ್ಷಗೆ ಮೃತದೇಹವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ಕಾದಂಬರಿಗಳು

‘ಆವರ್ತ’, ‘ಗತ’, ‘ಮಾಯೆ’, ‘ಚಿತ್ತರಂಗ’, ಕೆಂಪು ದಾಸವಾಳ, ವಕ್ಷ ಸ್ಥಲ ಕಾದಂಬರಿಗಳನ್ನು, ‘ಆರನೇ ಬೆರಳು’, ‘ಬೊಗಸೆಯಲ್ಲಿ ಕಥೆಗಳು’, ‘ಅಪರೂಪದ ಪುರಾಣ ಕಥೆಗಳು’ ಮೊದಲಾದ ಕಥಾಸಂಕಲನಗಳನ್ನೂ, ‘ಚೂಡಾಮಣಿ’, ‘ಕ್ಷಮಾದಾನ’, ‘ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು’ ‘ಪೂತನಿ ಮತ್ತಿತರ ನಾಟಕಗಳು’,  ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದಾರೆ.

ಕನ್ನಡದ ಖ್ಯಾತ ಲೇಖಕಿ ಶ್ರೀಮತಿ ಆಶಾ ರಘು ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಶ್ರೀಯುತರ  ನಿಧನದಿಂದ ಕನ್ನಡ ಸಾಹಿತ್ಯ ಲೋಕ ಮಹತ್ವದ ಲೇಖಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

 

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago