Featured

ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ  ವಿಧಿವಶ – Vishwanews24

ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ  ವಿಧಿವಶ – Vishwanews24

ಧಾರವಾಡ :ಸಮನ್ವಯ ಕವಿ’ ಎಂದು ಗುರುತಿಸಲಾಗುವ ನಾಡೋಜ ಚೆನ್ನವೀರ ಕಣವಿ ಅಸುನೀಗಿದ್ದಾರೆ. ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ ಸೋಂಕು ತಗುಲಿದ್ದ ಡಾ. ಚೆನ್ನವೀರ ಕಣವಿ ಜನವರಿ 14 ರಂದು ಎಸ್.ಡಿ.ಎಮ್.ಆಸ್ಪತ್ರೆಗೆ ದಾಖಲಾಗಿದ್ದರು. ಇದಲ್ಲದೆ ಅಕ್ಯೂಟ್​ ರೆಸ್ಪಿರೇಟರಿ ಡಿಸ್ಟ್ರೆಸ್​ ಸಿಂಡ್ರೋಮ್​ನಿಂದ  ಚೆನ್ನವೀರ ಕಣವಿ ಬಳಲುತ್ತಿದ್ದರು.

ತಂದೆ ಸಕ್ರಪ್ಪ- ತಾಯಿ ಪಾರ್ವತವ್ವ ದಂಪತಿಗಳ ಪುತ್ರನಾಗಿ ಧಾರವಾಡ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದ್ದ ಚೆನ್ನವೀರ ಕಣವಿ ಶಿರುಂಡ, ಗರಗಗಳಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬಿ.ಎ. ಪದವಿ (1950), ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ.ಪದವಿ (1952) ಗಳಿಸಿದರು.

ಕಣವಿ ಅವರು ಕವಿತೆ, ವಿಮರ್ಶೆ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕನ್ನಡ ನಾಡಿನ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಕಣವಿ ಅವರ ಕಾವ್ಯಸಂಕಲನಗಳಲ್ಲಿ ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ದೀಪಧಾರಿ, ಮೆರವಣಿಗೆ, ಜೀವಧ್ವನಿ, ನಗರದಲ್ಲಿ ನೆರಳು, ಚಿರಂತನದಾಸ ಪ್ರಸಿದ್ಧವಾಗಿವೆ. ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಸಮತೋಲನ ಇತ್ಯಾದಿ ವಿಮರ್ಶಾ ಗ್ರಂಥಗಳು ಜನಪ್ರಿಯವಾಗಿವೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

24 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago