ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ – Vishwanews24
ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ – Vishwanews24
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ.
ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಹೊಸಕೆರೆಹಳ್ಳಿಯ ಖಾಸಗಿ ಆಸ್ಪತ್ರೆಯಿಂದ ಬನಶಂಕರಿಗೆ ಮೃತದೇಹ ಕೊಂಡೊಯ್ಯಲು ಸಿದ್ದತೆ ನಡೆಸಲಾಗುತ್ತಿದೆ. ಮನೆಯ ಬಳಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ.
ಭಾರತದ ದಕ್ಷಿಣ ಆಫ್ರಿಕಾ ಪ್ರವಾಸದ ಟಿ20 ಪಂದ್ಯಾವಳಿ ಮುಂದೂಡಿಕೆ : BCCI – Vishwanews24
