ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ʻಕರಿಮಣಿʼ, ʻಶಾಂತಂ ಪಾಪಂʼ ಸೇರಿದಂತೆ ಹಲವು ಧಾರವಾಹಿಗಳಿಗೆ ವಿನೋದ್ ನಿರ್ದೇಶನ ಮಾಡಿದ್ದರು. ಸದ್ಯ ನಿನಾಸಮ್ ಸತೀಶ್ ನಟನೆಯ ʻಅಶೋಕ ಬ್ಲೇಡ್ʼ ಚಿತ್ರ ನಿರ್ದೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಮುಂದಿನ ವಾರದಿಂದ ಚಿತ್ರೀಕರಣ ಶುರು ಮಾಡಬೇಕಿತ್ತು. ಕಳೆದ ಎರಡು ವರ್ಷಗಳಿಂದಲೂ ಚಿತ್ರದ ಶೂಟಿಂಗ್ ಕುಂಟುತ್ತಲೇ ಸಾಗಿತ್ತು. ನಿರ್ಮಾಪಕರಾಗಿದ್ದರಿಂದ ಸಾಲದ ಸುಳಿಗೆ ಸಿಲುಕಿದ್ದ ವಿನೋದ್ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಿನ್ನೆ ಸಂಜೆಯಷ್ಟೇ ನಿನಾಸಂ ಸತೀಶ್ ಮತ್ತು ಚಿತ್ರತಂಡದ ಜೊತೆ ಮಾತನಾಡಿ ವಿನೋದ್ ದೊಂಡಾಲೆ ಬಂದಿದ್ದರು ಎನ್ನಲಾಗಿದೆ. ವಿನೋದ್ ವಿ ದೋಂಡಾಲೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಿರ್ದೇಶಕ. ಪಿ.ಶೇಷಾದ್ರಿ, ಟಿ.ಎನ್, ಸೀತಾರಾಂ ಅವರ ಜೊತೆ ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ಸಂಚಿಕೆ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ನಗರಬಾವಿಯಲ್ಲಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸದ್ಯ ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅತಿಥಿ,ಬೇರು,ತುತ್ತೂರಿ, ವಿಮುಕ್ತಿ ಸೇರಿದಂತೆ ಹಲವು ಚಿತ್ರಗಳಲ್ಲಿ ವಿನೋದ್ ಕೆಲಸ ಮಾಡಿದ್ದರು. ನಟ, ನಿರ್ದೇಶಕ, ನಿರ್ಮಾಪಕರಾಗಿಯೂ ಸಕ್ರಿಯರಾಗಿದ್ದರು.
ಇನ್ನೂ ಕೆಲವು ಸಿನಿಮಾಗಳ ಎರಡನೇ ಭಾಗದ ಚಿತ್ರೀಕರಣ ನಡೆಯುತ್ತಿದೆ. ಈಗ ಸತೀಶ್ ನೀನಾಸಂ ನಟನೆಯ ‘ಅಶೋಕ ಬ್ಲೇಡ್’ ಸಿನಿಮಾ ಸಹ ಎರಡು ಭಾಗಗಳಲ್ಲಿ ರಿಲೀಸ್ ಆಗಲಿದೆ.ಅವರ ವೃತ್ತಿ ಬದುಕಿನ ಬಹಳ ವಿಶೇಷ ಸಿನಿಮಾ ಎಂದೇ ಅನಿಸಿಕೊಂಡಿರುವ ಮತ್ತು ಬಿಗ್ ಬಜೆಟ್ನಲ್ಲಿ ತಯಾರಾಗುತ್ತಿರುವ ಈ ಸಿನಿಮಾವನ್ನು ವಿನೋದ್ ವಿ ದೊಂಡಾಲೆ ನಿರ್ದೇಶನ ಮಾಡುತ್ತಿದ್ದಾರೆ. 70ರ ದಶಕದಲ್ಲಿ ನಡೆಯಲಿರುವ ಇದರ ಕಥೆಯನ್ನು ಎರಡು ಭಾಗಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…