ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿದ್ದ ಕಜಾನ್ ಖಾನ್ ಹೃದಯಾಘಾತದಿಂದ ನಿಧನ – Vishwanews24
ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಅಭಿನಯಿಸಿದ್ದ ಕಜಾನ್ ಖಾನ್ ಹೃದಯಾಘಾತದಿಂದ ನಿಧನ
ಕೊಚ್ಚಿ : ಬಹುಬಾಷಾಯಲ್ಲಿ ಅಭಿನಯಿಸಿದ್ದ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ.
ಹಬ್ಬ, ನಾಗದೇವತೆ ಹೀಗೆ ಕನ್ನಡ ಸಿನಿಮಾದಲ್ಲಿ ಅಭಿನಯಿಸಿದ್ದ ಕಜಾನ್ ಖಾನ್ 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದ್ದರು.ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು.
ಕಜಾನ್ ಖಾನ್, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ ಎನ್. ಎಂ ಬಾದುಷಾ ಅವರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.ಕಜಾನ್ ಖಾನ್ ಅವರು ಆ ಕಾಲದಲ್ಲಿಯೇ ದಕ್ಷಿಣ ಭಾರತದ ಹ್ಯಾಂಡ್ಸಮ್ ಖಳನಟ ಎಂಬ ಹೆಸರು ಪಡೆದುಕೊಂಡಿದ್ದರು.
ಕಜಾನ್ ಖಾನ್ ಅವರ ಹಠಾತ್ ನಿಧನವು ಮಲಯಾಳಂ, ತಮಿಳು ಮತ್ತು ಕನ್ನಡ ಚಿತ್ರರಂಗದ ಎಲ್ಲರಿಗೂ ದೊಡ್ಡ ಆಘಾತವನ್ನುಂಟು ಮಾಡಿದೆ.
